September 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ಅಬ್ದುಲ್ ರಹಮಾನ್ ಕೊಲೆ ಪ್ರಕರಣ – ಭರತ್ ಕುಮ್ದೇಲ್ ಸೇರಿ 8 ಮಂದಿಗೆ ಕೋಕಾ ಕೋರ್ಟ್ ಜಾಮೀನು

ಪ್ರಖ್ಯಾತ ಹಾಗೂ ಪ್ರತಿಷ್ಠಿತ ನ್ಯಾಯವಾದಿ ಮಹೇಶ್ ಕಜೆ ಅವರ ಪರಿಣಾಮಕಾರಿ ವಾದ

ಬಂಟ್ವಾಳದ ಅಬ್ದುಲ್ ರಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭರತ್ ಕುಮ್ದೇಲ್ ಸೇರಿದಂತೆ ಎಂಟು ಮಂದಿಯನ್ನು ಪ್ರಕರಣದಲ್ಲಿ ಆರೋಪಿಗಳಾಗಿ ಸೇರಿಸಿ, ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ಹಾಗೂ ವಾದ-ಪ್ರತಿವಾದಗಳು ನಡೆದವು.

ಭರತ್ ಕುಮ್ದೇಲ್ ಸೇರಿದಂತೆ ಎಂಟು ಮಂದಿಯ ಪರವಾಗಿ ಪುತ್ತೂರು ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ಹಾಗೂ ಪ್ರತಿಷ್ಠಿತ ನ್ಯಾಯವಾದಿಯವರಾದ ಮಹೇಶ್ ಕಜೆ ಅವರು ಸುದೀರ್ಘವಾಗಿ ವಾದ ಮಂಡಿಸಿದರು. ಆರೋಪಿಗಳ ವಿರುದ್ಧದ ಪ್ರಕರಣದಲ್ಲಿ ಅವರ ನೇರ ಪಾತ್ರ ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡುಬರುವುದಿಲ್ಲ ಹಾಗೂ ತನಿಖೆಯಲ್ಲಿನ ಅಂಶಗಳನ್ನು ಪರಿಗಣಿಸುವಂತೆ ನ್ಯಾಯಾಲಯದ ಗಮನಕ್ಕೆ ತರಲಾಯಿತು.

ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಮೈಸೂರಿನ ಕೋಕಾ ವಿಶೇಷ ನ್ಯಾಯಾಲಯವು ಭರತ್ ಕುಮ್ದೇಲ್ ಸೇರಿದಂತೆ ಎಂಟು ಮಂದಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಆರೋಪಿಗಳ ಪರವಾಗಿ ನ್ಯಾಯವಾದಿ ಮಹೇಶ್ ಕಜೆ ಅವರೊಂದಿಗೆ ನ್ಯಾಯವಾದಿಗಳಾದ ರಾಘವೇಂದ್ರ ಮೈಸೂರು ಹಾಗೂ ಪ್ರಸಾದ್ ಕುಮಾರ್ ಬಿ.ಸಿ. ರೋಡ್ ಅವರು ವಕಾಲತ್ತು ವಹಿಸಿದ್ದರು.

ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್‌ವೆಲ್, ಅಬ್ದುಲ್ ರಹಮಾನ್ ಕೊಲೆ ಪ್ರಕರಣದಲ್ಲಿ ನಿರಪರಾಧಿಗಳನ್ನು ಬಂಧಿಸಿ ಹಿಂದೂ ಸಂಘಟನೆಯ ಪ್ರಮುಖರನ್ನು ಗುರಿಯಾಗಿಸಲಾಗಿದೆ ಎಂದು ಆರೋಪಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋಕಾ ನ್ಯಾಯಾಲಯದ ಜಾಮೀನು ಆದೇಶವು ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

You may also like

News

ದೇರಳಕಟ್ಟೆಯ ಫಾದರ್ ಮುಲ್ಲರ್ ಫಾರ್ಮಸಿ ಕಾಲೇಜಿನಲ್ಲಿ ಬಿ.ಫಾರ್ಮ್ ಮೂರನೇ ಬ್ಯಾಚ್‌ಗೆ ಚಾಲನೆ

ದೇರಳಕಟ್ಟೆಯ ಫಾದರ್ ಮುಲ್ಲರ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್‌ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಬಿ.ಫಾರ್ಮ್ ಮೂರನೇ ಬ್ಯಾಚ್‌ನ ಕೋರ್ಸ್ ಉದ್ಘಾಟನಾ ಸಮಾರಂಭ ಸೆಪ್ಟೆಂಬರ್ 16ರಂದು ಬುಧವಾರ ಕಾಲೇಜಿನ
News

ಸೆಪ್ಟೆಂಬರ್ 19ರಂದು ರಾಷ್ಟ್ರೀಯ ಲೋಕ ಅದಾಲತ್ – 8,515 ಪ್ರಕರಣಗಳ ಇತ್ಯರ್ಥಕ್ಕೆ ಸಿದ್ಧತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಪ್ರಧಾನ

You cannot copy content of this page