September 23, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌಜನ್ಯ ಪ್ರಕರಣ ಮರುತನಿಖೆಗೆ ಧರ್ಮಸ್ಥಳದ ಮುಕ್ತ ಸ್ವಾಗತ; “ನಿಷ್ಪಕ್ಷಪಾತ ತನಿಖೆಯಿಂದ ತಾರ್ಕಿಕ ಅಂತ್ಯ ಸಿಗಲಿ”

ಕುಮಾರಿ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಲು ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಮುಕ್ತಮನಸ್ಸಿನಿಂದ ಸ್ವಾಗತಿಸಲಾಗಿದೆ.

ಈ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯ ಕಚೇರಿಯ ವ್ಯವಸ್ಥಾಪಕರಾದ ಕೆ. ಪಾರ್ಶ್ವನಾಥ್ ಜೈನ್ ಅವರು ಸೆಪ್ಟೆಂಬರ್ 21ರಂದು ಸೋಮವಾರ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಶ್ರೀ ಕ್ಷೇತ್ರದ ವಿರುದ್ಧ ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನ ಮಾಡುತ್ತಿವೆ ಎಂದು ತಿಳಿಸಿದ್ದಾರೆ.

ಕುಮಾರಿ ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ನಡೆಯಲಿರುವ ಮರುತನಿಖೆಯು ಸಂಪೂರ್ಣ ನಿಷ್ಪಕ್ಷಪಾತ ಮತ್ತು ಪಾರದರ್ಶಕವಾಗಿ ನಡೆಯಬೇಕು. ತನಿಖೆಯ ಮೂಲಕ ಪ್ರಕರಣದ ಸತ್ಯಾಂಶ ಹೊರಬಂದು, ಹಲವು ವರ್ಷಗಳಿಂದ ಬಾಕಿ ಉಳಿದಿರುವ ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂಬ ಆಶಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ವ್ಯಕ್ತಪಡಿಸಿದೆ.

ಸೌಜನ್ಯ ಪ್ರಕರಣದ ಮರುತನಿಖೆಗೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿರುವುದನ್ನು ಹಲವು ಮಾಧ್ಯಮಗಳು ವರದಿ ಮಾಡಿವೆ; ಹೊಸ ತನಿಖೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿರುವುದಾಗಿ ವರದಿಯಾಗಿದೆ.

You may also like

News

ಶಾರ್ಜಾದಲ್ಲಿ ಉಡುಪಿ ಮೂಲದ ಆಲ್ವಿನ್ ಪ್ರಕಾಶ್ ಹತ್ಯೆ – 9 ತುಂಡುಗಳಾಗಿ ಶವ ಪತ್ತೆ

ಪತ್ನಿ ಟೀನಾ ಹಾಗೂ ಪುತ್ರ ನಾಪತ್ತೆ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಅಲ್ವಿನ್ ಪ್ರಕಾಶ್ ಕುಂದರ್ ಅವರ ಶಾರ್ಜಾ ಹತ್ಯೆ ಪ್ರಕರಣ ಇದೀಗ ಮತ್ತಷ್ಟು ನಿಗೂಢ ತಿರುವು
News

BPL ಕುಟುಂಬಗಳಿಗೆ ಉಚಿತ ರಕ್ತ: ಮುಂದಿನ ವರ್ಷದಿಂದ ಯೋಜನೆ ಜಾರಿ – ಸಿಎ ಶಾಂತಾರಾಮ ಶೆಟ್ಟಿ

ಜಿಲ್ಲೆಯ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ BPL ಕಾರ್ಡ್‌ದಾರರಿಗೆ ಉಚಿತವಾಗಿ ರಕ್ತ ಪೂರೈಸುವ ಯೋಜನೆಯನ್ನು ಮುಂದಿನ ವರ್ಷದಿಂದ ಜಾರಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾ

You cannot copy content of this page