September 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ – ₹24 ಲಕ್ಷ ಮೌಲ್ಯದ MDMA ವಶ!

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು MDMAಯನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (CCB) ಪೊಲೀಸರು ಮೂವರನ್ನು ಬಂಧಿಸಿ, ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ MDMA ಸೇರಿದಂತೆ ಒಟ್ಟು ₹29.80 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು ನಗರದಿಂದ MDMA ಖರೀದಿಸಿ ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸರು ಸೆಪ್ಟೆಂಬರ್ 26ರಂದು ಶನಿವಾರ ಸಂಜೆ ಉಳ್ಳಾಲ ತಾಲೂಕು ಮುಡಿಪು ಕಾಯರ್‌ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 240 ಗ್ರಾಂ MDMA, ನಾಲ್ಕು ಮೊಬೈಲ್ ಫೋನ್‌ಗಳು ಹಾಗೂ ಮಾದಕವಸ್ತು ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ಟೆಂಪೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ₹29,80,000 ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು:

  1. ನವಾಜ್ @ ನವ್ವಾ @ ಮುಡಿಪು ನವಾಜ್, 35 ವರ್ಷ, ಗೌಸಿಯಾ ಕಂಪೌಂಡ್, ಗೌಸಿಯಾ ಜುಮ್ಮಾ ಮಸೀದಿ ಬಳಿ, ಕೈರಂಗಳ ಗ್ರಾಮ, ಮುಡಿಪು, ಉಳ್ಳಾಲ ತಾಲೂಕು.
  2. ಮೊಹಮ್ಮದ್ ಆರೀಫ್ ಎನ್, 36 ವರ್ಷ, ನಟ್ಟಿಹಿತ್ತಲು ಮನೆ, ಕೈರಂಗಳ ಅಂಚೆ, ಮುಡಿಪು, ಉಳ್ಳಾಲ ತಾಲೂಕು.
  3. ಲಾಯ್ಡ್ ಡಿಸೋಜ, 35 ವರ್ಷ, ಮತ್ತೆಬಾರೆ, ಕೈರಂಗಳ ಅಂಚೆ, ಮುಡಿಪು, ಉಳ್ಳಾಲ ತಾಲೂಕು.

ನವಾಜ್ ವಿರುದ್ಧ 16 ಪ್ರಕರಣಗಳು:

ಪೊಲೀಸ್ ಪ್ರಕಟಣೆಯ ಪ್ರಕಾರ, ಆರೋಪಿ ನವಾಜ್ @ ನವ್ವಾ @ ಮುಡಿಪು ನವಾಜ್ ವಿರುದ್ಧ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ, ಮೋಸ, ದನಗಳ್ಳತನ ಹಾಗೂ ಮಾದಕವಸ್ತು ಮಾರಾಟ ಸೇರಿದಂತೆ ವಿವಿಧ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 16 ಪ್ರಕರಣಗಳು ದಾಖಲಾಗಿವೆ.

ಇವುಗಳಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ 12, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 2, ಮುಲ್ಕಿ ಪೊಲೀಸ್ ಠಾಣೆಯಲ್ಲಿ 1 ಹಾಗೂ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಈತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ತಲಾ ಎರಡು ಪ್ರಕರಣಗಳು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ಆರೋಪಿಗಳಿಗಾಗಿ ಶೋಧ:

ಈ MDMA ಮಾರಾಟ ಮತ್ತು ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆ ಇದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

You may also like

News

‘ಹಿಂದೂ ಕಾರ್ಯಕರ್ತರ ಮೇಲಿನ ದಮನ ಖಂಡನೀಯ’ – ಬಿ.ಸಿ. ರೋಡ್ ಚಲೋ ಯಶಸ್ವಿಗೊಳಿಸಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ

ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಕ್ರಮವನ್ನು ಖಂಡಿಸಿ ನಾಳೆ ಸೆಪ್ಟೆಂಬರ್ 28ರಂದು ಸೋಮವಾರ ನಡೆಯಲಿರುವ ‘ಬಿ.ಸಿ. ರೋಡ್ ಚಲೋ’
News

ಜೀವನ್ಮರಣ ಹೋರಾಟದಲ್ಲಿದ್ದ ಗರ್ಭಿಣಿಗೆ ಲೇಡಿಗೋಷನ್ ಆಸ್ಪತ್ರೆಯಲ್ಲಿ ‘ಪುನರ್ಜನ್ಮ’!

ಕೆ.ಎಂ.ಸಿ. ತಜ್ಞರ ಸಹಕಾರದೊಂದಿಗೆ ನಾಲ್ಕು ಗಂಟೆಗಳ ಸಂಕೀರ್ಣ ಶಸ್ತ್ರಚಿಕಿತ್ಸೆ; ತಾಯಿ ಪ್ರಾಣ ಉಳಿಸಿದ ವೈದ್ಯರ ತಂಡ ಮಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸವಾಲಿನ ಹಂತ ತಲುಪಿದ್ದ ಜೀವನ್ಮರಣದ

You cannot copy content of this page