October 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

‘ಹಿಂದೂ ಕಾರ್ಯಕರ್ತರ ಮೇಲಿನ ದಮನ ಖಂಡನೀಯ’ – ಬಿ.ಸಿ. ರೋಡ್ ಚಲೋ ಯಶಸ್ವಿಗೊಳಿಸಲು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ

ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಕ್ರಮವನ್ನು ಖಂಡಿಸಿ ನಾಳೆ ಸೆಪ್ಟೆಂಬರ್ 28ರಂದು ಸೋಮವಾರ ನಡೆಯಲಿರುವ ‘ಬಿ.ಸಿ. ರೋಡ್ ಚಲೋ’ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ರಾಜಕೀಯ ಪ್ರೇರಿತವಾಗಿ ಹಿಂದೂ ಸಂಘಟನೆಗಳು ಹಾಗೂ ಹಿಂದೂ ಸಮಾಜದ ಪ್ರಮುಖರನ್ನು ಗುರಿಯಾಗಿಸುವ ಕ್ರಮವನ್ನು ಸರ್ಕಾರ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂ ಪರ ಹೋರಾಟಗಾರರ ಧ್ವನಿಯನ್ನು ದಮನಿಸುವ ಪ್ರಯತ್ನಗಳು ಪದೇಪದೇ ನಡೆಯುತ್ತಿವೆ ಎಂಬುದು ತಮ್ಮ ಆರೋಪವಾಗಿದೆ ಎಂದು ಕ್ಯಾಪ್ಟನ್ ಚೌಟ ಹೇಳಿದ್ದಾರೆ.

ಗೂಂಡಾ, ಕೋಕಾ ಕಾಯ್ದೆ ಬಳಕೆಗೆ ಆಕ್ಷೇಪ:

ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ಹಾಗೂ ಕೋಕಾ ಕಾಯ್ದೆ ಸೇರಿದಂತೆ ವಿವಿಧ ಕಾನೂನು ಕ್ರಮಗಳನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಇಂತಹ ಕ್ರಮಗಳು ದ್ವೇಷದ ರಾಜಕಾರಣಕ್ಕೆ ಕಾರಣವಾಗುತ್ತವೆ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಹಿಂದೂ ಸಮಾಜದವರು ಒಗ್ಗೂಡಿ ತಮ್ಮ ಪ್ರತಿಭಟನೆಯನ್ನು ದಾಖಲಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ:

ಸೆಪ್ಟೆಂಬರ್ 28ರಂದು ನಡೆಯಲಿರುವ ಬಿ.ಸಿ. ರೋಡ್ ಚಲೋ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮನವಿ ಮಾಡಿದ್ದಾರೆ.

You may also like

News

ಕಳ್ಳತನ ಪ್ರಕರಣ – ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಿಟ್ಲ ಪೊಲೀಸರಿಂದ ಬಂಧನ

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದೂವರೆ ವರ್ಷದಿಂದ ತಲೆಮರೆಸಿಕೊಂಡಿದ್ದ ಕೇರಳದ ಮಲಪ್ಪುರಂ ನಿವಾಸಿ ರಂಶೀದ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ
News

Father Muller Medical College Hospital Showcases Green Healthcare Initiatives at NABH National Patient Safety Conference in Delhi

Selected for a national-level presentation, FMMCH highlights sustainable environmental practices, responsible resource management and resilience in healthcare delivery Father Muller

You cannot copy content of this page