September 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟಕ್ಕೆ ಚಾಲನೆ – 123 ಭಜನಾ ಮಂಡಳಿಗಳ 204 ಶಿಬಿರಾರ್ಥಿಗಳು ಭಾಗಿ

ಭಜನೆಯಿಂದ ಜೀವನ ಪಾವನ ಹಾಗೂ ಮನಸ್ಸಿಗೆ ಶಾಂತಿ – ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ

ಉಜಿರೆ: ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ಪರಿಶುದ್ಧ ಮನಸ್ಸು, ದೇಹ ಹಾಗೂ ನಾಲಿಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಇಂದು ಸೆಪ್ಟೆಂಬರ್ 28ರಂದು ಸೋಮವಾರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ 28ನೇ ವರ್ಷದ ಭಜನಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.

ಕಲಿಯುಗದಲ್ಲಿ ಅನ್ನ-ನೀರು ತ್ಯಜಿಸಿ ಕಠಿಣ ತಪಸ್ಸು ಮಾಡುವುದು ಎಲ್ಲರಿಗೂ ಸಾಧ್ಯವಿಲ್ಲ. ಆದ್ದರಿಂದ ದೇವರು ನೀಡಿರುವ ದೇಹ, ಮನಸ್ಸು, ನಾಲಿಗೆ ಹಾಗೂ ವಿವೇಕವನ್ನು ಸದುಪಯೋಗಪಡಿಸಿಕೊಂಡು ಭಕ್ತಿಯಿಂದ ಭಜನೆ ಮಾಡಿದರೆ ಜೀವನದಲ್ಲಿ ಸುಖ, ಶಾಂತಿ ಮತ್ತು ನೆಮ್ಮದಿ ದೊರೆಯುತ್ತದೆ ಎಂದು ಸ್ವಾಮೀಜಿ ತಿಳಿಸಿದರು.

ಧರ್ಮಸ್ಥಳದ ಚತುರ್ದಾನ ಪರಂಪರೆಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಮನೆ-ಮನಗಳಲ್ಲಿ ಭಜನಾ ಸಂಸ್ಕೃತಿಯ ಬಗ್ಗೆ ಅರಿವು ಮತ್ತು ಧರ್ಮಜಾಗೃತಿ ಮೂಡಿಸುವಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆ ದಂಪತಿಯ ಸೇವೆಯನ್ನು ಸ್ವಾಮೀಜಿ ಶ್ಲಾಘಿಸಿದರು.

ಭಜಕರು ಊರಿನ ಪ್ರಗತಿಯ ರೂವಾರಿಗಳಾಗಲಿ – ಡಾ. ವೀರೇಂದ್ರ ಹೆಗ್ಗಡೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಧರ್ಮಸ್ಥಳದಲ್ಲಿ ತರಬೇತಿ ಪಡೆಯುವ ಭಜನಾಪಟುಗಳು ತಮ್ಮ ತಮ್ಮ ಊರಿನ ಪ್ರಗತಿಯ ರೂವಾರಿಗಳಾಗಬೇಕು ಎಂದು ಕರೆ ನೀಡಿದರು.

ಭಜಕರು ಆದರ್ಶ ನಾಯಕರಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಮಕ್ಕಳಿಗೂ ಭಜನಾ ಸಂಸ್ಕೃತಿ ಮತ್ತು ಉತ್ತಮ ಮೌಲ್ಯಗಳನ್ನು ಬೆಳೆಸುವ ವಾತಾವರಣ ಕಲ್ಪಿಸಬೇಕು ಎಂದು ಅವರು ಸಲಹೆ ನೀಡಿದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಶುಭ ಹಾರೈಸಿದರು. ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ನಿಶ್ಚಲ್ ಕುಮಾರ್ ಹಾಗೂ ಐಶ್ವರ್ಯ ನಿಶ್ಚಲ್ ಕುಮಾರ್ ಉಪಸ್ಥಿತರಿದ್ದರು.

ವಿದುಷಿ ಚೈತ್ರಾ ಭಟ್ ಧರ್ಮಸ್ಥಳ ಮತ್ತು ಬಳಗದವರ ನೃತ್ಯ ಪ್ರದರ್ಶನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ವಂದಿಸಿದರು. ಶಿಕ್ಷಕ ನಿಶಾಂತ್ ಕಾರ್ಯಕ್ರಮ ನಿರ್ವಹಿಸಿದರು. ಡಾ. ಶಶಿಕಾಂತ ಜೈನ್ ಅವರ ಶಾಂತಿಮಂತ್ರ ಪಠಣದೊಂದಿಗೆ ಸಮಾರಂಭ ಮುಕ್ತಾಯಗೊಂಡಿತು.

ಈ ವರ್ಷದ ಭಜನಾ ಕಮ್ಮಟದಲ್ಲಿ 123 ಭಜನಾ ಮಂಡಳಿಗಳಿಂದ 204 ಶಿಬಿರಾರ್ಥಿಗಳು ಭಾಗವಹಿಸುತ್ತಿದ್ದಾರೆ.

You may also like

News

ಮಾಣಿ ಫ್ಲೈಓವರ್ ಬಳಿ ಭೀಕರ ಅಪಘಾತ – ಮಹಿಳೆ ಮೃತ್ಯು, ಮೂವರು ಗಂಭೀರ

ಬಂಟ್ವಾಳ: ಮಾಣಿ ಫ್ಲೈಓವರ್ ಆರಂಭವಾಗುವ ರಸ್ತೆಯ ಬಳಿ ಆಲ್ಟೋ ಕಾರು ಹಾಗೂ ಟೆಂಪೋ ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಡಿಕೇರಿ ಮೂಲದ ಮಹಿಳೆಯೊಬ್ಬರು ಮೃತಪಟ್ಟಿದ್ದು,
News

ಬಿ.ಸಿ. ರೋಡ್ ಪ್ರತಿಭಟನೆಗೆ ಬಿಗಿ ಪೊಲೀಸ್ ಬಂದೋಬಸ್ತ್

ಪೊಲೀಸ್ ಪಥಸಂಚಲನ; 8 ಪೊಲೀಸ್ ನಿರೀಕ್ಷಕರು, 23 ಪಿಎಸ್‌ಐ ಸೇರಿದಂತೆ 260ಕ್ಕೂ ಅಧಿಕ ಅಧಿಕಾರಿ-ಸಿಬ್ಬಂದಿ ನಿಯೋಜನೆ ಬಂಟ್ವಾಳ: ಸೆಪ್ಟೆಂಬರ್ 28ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ

You cannot copy content of this page