September 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವ ಉದ್ಯಮಿ ರಮ್ಲಾನ್ ನೆಡ್ಯಾಲ್ ನಿಧನ

ಬಂಟ್ವಾಳ: ನೇರಳಕಟ್ಟೆ ರೈಲ್ವೇ ಸ್ಟೇಷನ್ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರ, ಯುವ ಉದ್ಯಮಿ 48 ವರ್ಷ ಪ್ರಾಯದ ರಮ್ಲಾನ್ ನೆಡ್ಯಾಲ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ಸೆಪ್ಟೆಂಬರ್ 29ರಂದು ಮಂಗಳವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಯುವ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಅವರು ಸ್ಥಳೀಯ ಕ್ರೀಡಾ ಸಂಸ್ಥೆಯ ಪೋಷಕರಾಗಿ ಹಾಗೂ ಸಮಾಜ ಸೇವಕರಾಗಿ ಸೇವೆ ಸಲ್ಲಿಸಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದರು.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಬಂಧುಗಳು, ಸ್ನೇಹಿತರು ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.

You may also like

News

ಕರಾವಳಿಯಲ್ಲಿ ಹೈಕೋರ್ಟ್ ಪೀಠ – ಸಾಧ್ಯಾಸಾಧ್ಯತೆ ಪರಿಶೀಲನೆಗೆ 3 ಸದಸ್ಯರ ಸಮಿತಿ ರಚಿಸಿದ ಕರ್ನಾಟಕ ಹೈಕೋರ್ಟ್

ಮಂಗಳೂರು ಅಥವಾ ಉಡುಪಿಯಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಅಥವಾ ಶಾಶ್ವತ ಪೀಠವನ್ನು ಸ್ಥಾಪಿಸುವ ಬಹುಕಾಲದ ಬೇಡಿಕೆಗೆ ಸಂಬಂಧಿಸಿದಂತೆ ಪ್ರಮುಖ ಸಾಂಸ್ಥಿಕ ಬೆಳವಣಿಗೆಯೊಂದು ನಡೆದಿದೆ. ಕರಾವಳಿ ಭಾಗದಲ್ಲಿ ಪೀಠ
News

NITK Surathkal Hosts National Conclave to Strengthen Innovation and Entrepreneurship Across NITs

Over 50 Delegates from 30 NITs Discuss Research Translation, Technology Licensing and Startup Incubation The National Institute of Technology Karnataka

You cannot copy content of this page