September 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನ್ಯಾಯಾಂಗದ ಬಗ್ಗೆ ಸುಳ್ಳು ಹೇಳಿಕೆ ಆರೋಪ – ವಕೀಲ ಪ್ರಸಾದ್ ವಿರುದ್ಧ ದೂರು

ಬಂಟ್ವಾಳ: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಪೊಲೀಸ್ ತನಿಖೆಯ ಕುರಿತು ಸಾರ್ವಜನಿಕವಾಗಿ ತಪ್ಪು ಹಾಗೂ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ವಕೀಲ ಪ್ರಸಾದ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ ಬಡಗಬೆಳ್ಳೂರು ನಿವಾಸಿ 43 ವರ್ಷ ಪ್ರಾಯದ ಹನೀಫ್ ಅವರು ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ಸೆಪ್ಟೆಂಬರ್ 28ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಸಿ. ರೋಡ್‌ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು. ಈ ವೇಳೆ ನ್ಯಾಯಾಲಯದ ನಡಾವಳಿ ಹಾಗೂ ಪ್ರಕರಣವೊಂದರ ಪೊಲೀಸ್ ತನಿಖೆಯ ಕುರಿತು ಉದ್ದೇಶಪೂರ್ವಕವಾಗಿ ತಪ್ಪು ಹಾಗೂ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹನೀಫ್ ದೂರಿನಲ್ಲಿ ಆರೋಪಿಸಿದ್ದಾರೆ.

ಇದರಿಂದ ನ್ಯಾಯಾಂಗ ವ್ಯವಸ್ಥೆಯ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರನ್ನು ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಪೊಲೀಸರು ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

You may also like

News

ಸುರತ್ಕಲ್ MRPL ನಲ್ಲಿ ಭಾರಿ ಅವಘಡ – ಕೋಕರ್ ಹೈಡ್ರೋ ಟ್ರೀಟರ್ ಯುನಿಟ್‌ನಲ್ಲಿ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ!

ಸುರತ್ಕಲ್ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಸಂಸ್ಥೆಯ 3ನೇ ಹಂತದ (Phase 3) ‘ಕೋಕರ್ ಹೈಡ್ರೋ ಟ್ರೀಟರ್ ಯುನಿಟ್’ನಲ್ಲಿ
News

ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಬಸವರಾಜು ಅವರಿಗೆ ಮಂಗಳೂರು ವಕೀಲರ ಸಂಘದಿಂದ ಆತ್ಮೀಯ ಬೀಳ್ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಸವರಾಜು ಅವರು ನಿವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ವಕೀಲರ ಸಂಘದ ವತಿಯಿಂದ ಆತ್ಮೀಯ ಬೀಳ್ಕೊಡುಗೆ ಹಾಗೂ ಸನ್ಮಾನ

You cannot copy content of this page