ಬಿಜೈ ಕಾಪಿಕಾಡ್ ಅಂಗನವಾಡಿ ಪುಟಾಣಿಗಳಿಗೆ ನೆರವಿನ ಹಸ್ತ – ಬಟ್ಟೆ ಬ್ಯಾಗ್ ಹಾಗೂ ಸಿಹಿತಿಂಡಿ ವಿತರಣೆ
ಮಂಗಳೂರು: ಮುಂಬೈನ ಲೋಬೊ ಫೌಂಡೇಶನ್ ಹಾಗೂ ಗ್ಲೋಬಲ್ ಸಿಂಪಥಿ ಫೌಂಡೇಶನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಬಟ್ಟೆ ಬ್ಯಾಗ್ ಹಾಗೂ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಮಕ್ಕಳ ಶೈಕ್ಷಣಿಕ ಕಲಿಕೆಗೆ ಮತ್ತಷ್ಟು ಅನುಕೂಲವಾಗುವಂತೆ ಅಂಗನವಾಡಿ ಕೇಂದ್ರಕ್ಕೆ ಇಂಟರ್ನೆಟ್ ಸೌಲಭ್ಯ ಕಲ್ಪಿಸುವುದಾಗಿ ಗ್ಲೋಬಲ್ ಸಿಂಪಥಿ ಫೌಂಡೇಶನ್ ಅಧ್ಯಕ್ಷ ರೋನ್ಸ್ ಬಂಟ್ವಾಳ್ ತಿಳಿಸಿದರು.
ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿಯೂ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ ಅಂತರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ರಾಜ್ಯ ಜೂಡೋ ಅಸೋಸಿಯೇಷನ್ ಅಧ್ಯಕ್ಷ ಯತೀಶ್ ಎನ್. ಬಂಗೇರಾ, ಅಂಗನವಾಡಿ ಕೇಂದ್ರದ ಪುಟಾಣಿಗಳಿಗೆ ಸಮವಸ್ತ್ರ ಒದಗಿಸುವುದಾಗಿ ಭರವಸೆ ನೀಡಿದರು.


ಮಕ್ಕಳಿಗೆ ಅಗತ್ಯವಾದ ಶೈಕ್ಷಣಿಕ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಕಲಿಕೆಗೆ ಉತ್ತೇಜನ ನೀಡುವ ಈ ಪ್ರಯತ್ನಕ್ಕೆ ಪೋಷಕರು ಹಾಗೂ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಅಂಗನವಾಡಿ ಶಿಕ್ಷಕಿ ನಂದಾ ಹಾಗೂ ಲಕ್ಷ್ಮೀ ಉಪಸ್ಥಿತರಿದ್ದರು.



