ದಯಾ ವಿಶೇಷ ಮಕ್ಕಳ ಶಾಲೆಗೆ ಕಥೊಲಿಕ್ ಸಭಾ ಬೆಳ್ತಂಗಡಿ ವಲಯದಿಂದ ₹2.30 ಲಕ್ಷ ನೆರವು – ಕೃತಜ್ಞತೆ ಸಲ್ಲಿಸಿದ ಫಾದರ್ ವಾಲ್ಟರ್ ಡಿಮೆಲ್ಲೊ
ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಬೆಳ್ತಂಗಡಿ ವಲಯ ಇದರ ಆದ್ಯಾತ್ಮಿಕ ನಿರ್ದೇಶಕರು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಬೆಳ್ತಂಗಡಿಯ ದಯಾ ವಿಶೇಷ ಮಕ್ಕಳ ಶಾಲೆಗೆ ಭೇಟಿ ನೀಡಿ, ವಿಶೇಷ ಮಕ್ಕಳೊಂದಿಗೆ ಸಮಯ ಕಳೆದರು.




ಕಥೊಲಿಕ್ ಸಭಾ ಬೆಳ್ತಂಗಡಿ ವಲಯದ ವಿವಿಧ ಘಟಕಗಳಿಂದ ಸಂಗ್ರಹಿಸಲಾದ ಆಹಾರ ಸಾಮಗ್ರಿಗಳು ಹಾಗೂ ₹2,30,700 ಆರ್ಥಿಕ ನೆರವನ್ನು ದಯಾ ಸಂಸ್ಥೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅತೀ ವಂದನೀಯ ಫಾದರ್ ವಾಲ್ಟರ್ ಓಸ್ವಾಲ್ಡ್ ಡಿಮೆಲ್ಲೊ, ದಯಾ ವಿಶೇಷ ಮಕ್ಕಳ ಮೇಲಿನ ಪ್ರೀತಿ ಹಾಗೂ ಕಾಳಜಿಯಿಂದ ಕಥೊಲಿಕ್ ಸಭಾ ಸದಸ್ಯರು ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಸಹಕಾರ ನೀಡಿದ ಎಲ್ಲರಿಗೂ ದೇವರು ಉತ್ತಮ ಆರೋಗ್ಯ, ಸಂತೋಷ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಹಾರೈಸಿದರು.







ವಲಯದ ಅಧ್ಯಕ್ಷ ಆಲ್ಬರ್ಟ್ ಸುನೀಲ್ ಮೋನಿಸ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಸ್ವಾಗತಿಸಿದರು. ಹೆಚ್ಚಿನ ಆರ್ಥಿಕ ನೆರವು ನೀಡಿದ ಗಾರ್ಡಾಡಿ ಚರ್ಚ್ನ ಸದಸ್ಯರಿಗೆ ವಿಶೇಷ ಧನ್ಯವಾದ ಸಲ್ಲಿಸಲಾಯಿತು. ಗಾರ್ಡಾಡಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀವನ್ ಮೋನಿಸ್ ಅವರಿಗೆ ಕೃತಜ್ಞತೆ ವ್ಯಕ್ತಪಡಿಸಲಾಯಿತು.

ಬೆಳ್ತಂಗಡಿ ವಲಯದ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಗಾರ್ಡಾಡಿ ಮತ್ತು ನಾಳ ಚರ್ಚ್ಗಳ ಧರ್ಮಗುರುಗಳು ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಸಲ್ಲಿಸಲಾಯಿತು.


ವಲಯದ ಕಾರ್ಯದರ್ಶಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಎಲ್ಲರಿಗೂ ವಂದನಾರ್ಪಣೆ ಸಲ್ಲಿಸಿದರು.






