October 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಜೂರು ಮಖಾಂ ಉರೂಸ್‌ಗೆ ದಿನಾಂಕ ನಿಗದಿ – 2027ರ ಮಾರ್ಚ್ 19ರಿಂದ 28ರವರೆಗೆ

ಸಯ್ಯಿದ್ ಕುಂಬೋಳ್ ತಂಙಳ್ ಅವರಿಂದ ದಿನಾಂಕ ಘೋಷಣೆ – ಉರೂಸ್ ಪೋಸ್ಟರ್ ಬಿಡುಗಡೆ

ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರ ಕಾಜೂರು ಮಖಾಂ ಶರೀಫ್ನ 2027ನೇ ಸಾಲಿನ ಉರೂಸ್ ಕಾರ್ಯಕ್ರಮವು ಮಾರ್ಚ್ 19ರಿಂದ 28ರವರೆಗೆ ನಡೆಯಲಿದೆ. ಖಾಝಿ ಶೈಖುನಾ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ. ಉಸ್ತಾದ್ ಅವರ ನೇತೃತ್ವದಲ್ಲಿ ಹಾಗೂ ಸಯ್ಯಿದ್ ಕಾಜೂರು ತಂಙಳ್ ಅವರ ಮಾರ್ಗದರ್ಶನದಲ್ಲಿ ಉರೂಸ್ ಕಾರ್ಯಕ್ರಮ ನಡೆಯಲಿದೆ.

ಉರೂಸ್‌ನ ಅಧಿಕೃತ ದಿನಾಂಕವನ್ನು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಗೌರವಾಧ್ಯಕ್ಷರು ಹಾಗೂ ಸಮಸ್ತ ಕೇರಳ ಕೇಂದ್ರ ಮುಶಾವರ ಉಪಾಧ್ಯಕ್ಷರಾದ ಖುದುವತುಸ್ಸಾದಾತ್ ಅಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಳ್ ಅವರು ಘೋಷಿಸಿ, ಉರೂಸ್‌ನ ಅಧಿಕೃತ ಪೋಸ್ಟರ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಅಸಯ್ಯಿದ್ ಮುಖ್ತಾರ್ ತಂಙಳ್ ಉಪಸ್ಥಿತರಿದ್ದರು.

ಬಳಿಕ ನಿಯೋಗವು ಮರ್ಕಝ್‌ನಲ್ಲಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಉಸ್ತಾದ್ ಅವರನ್ನು ಭೇಟಿ ಮಾಡಿ ಉರೂಸ್ ಕಾರ್ಯಕ್ರಮದ ಕುರಿತು ನಿರ್ದೇಶನ ಹಾಗೂ ಮಾರ್ಗದರ್ಶನ ಪಡೆದುಕೊಂಡಿತು. ಕಾಜೂರು ಮತ್ತು ಕಿಲ್ಲೂರು ಜಂಟಿ ಆಶ್ರಯದಲ್ಲಿ ನಡೆಯಲಿರುವ ಈ ಬಾರಿಯ ಉರೂಸ್ ಕಾರ್ಯಕ್ರಮವನ್ನು ಸಂಪ್ರದಾಯಬದ್ಧವಾಗಿ ಹಾಗೂ ಹಿಂದಿನ ಗತವೈಭವ ಮರುಕಳಿಸುವ ರೀತಿಯಲ್ಲಿ ವಿಜೃಂಭಣೆಯಿಂದ ಆಯೋಜಿಸಲಾಗುವುದು ಎಂದು ಸಯ್ಯಿದ್ ಕುಂಬೋಳ್ ತಂಙಳ್ ತಿಳಿಸಿದರು.

ಪೋಸ್ಟರ್ ಬಿಡುಗಡೆ ಸಂದರ್ಭದಲ್ಲಿ ದರ್ಗಾ ಶರೀಫ್ ಉರೂಸ್ ಸಮಿತಿ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹುರಿ, ಪ್ರಧಾನ ಕಾರ್ಯದರ್ಶಿ ಜೆ.ಎಚ್. ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿ ಡಿ.ವೈ. ಉಮ್ಮರ್ ಕುಕ್ಕಾವು, ಜೊತೆ ಕಾರ್ಯದರ್ಶಿ ಶಾಹುಲ್ ಹಮೀದ್ ಹಾಗೂ ಪ್ರಮುಖರಾದ ಅಬೂಬಕ್ಕರ್ ಮಲ್ಲಿಗೆ, ಕೆ.ಯು. ಮುಹಮ್ಮದ್ ಸಖಾಫಿ ಕಾಜೂರು, ಮುಹಮ್ಮದ್ ಶರೀಫ್ ಸಅದಿ ದಿಡುಪೆ, ಬದ್ರುದ್ದೀನ್ ಕಿಲ್ಲೂರು, ಅಶ್ರಫ್ ಕಿಲ್ಲೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

You may also like

News

ಮಂಡ್ಯ ASP ತಿಮ್ಮಯ್ಯ ಇನ್ನಿಲ್ಲ – ಪೊಲೀಸ್ ಇಲಾಖೆಯಲ್ಲಿ ಶೋಕ

ಉಡುಪಿ, ಮಣಿಪಾಲ, ಕೋಟದಲ್ಲೂ ಸೇವೆ ಸಲ್ಲಿಸಿದ್ದ ಅಧಿಕಾರಿ ಮಂಡ್ಯ ಜಿಲ್ಲೆಯ ಅಪರ ಪೊಲೀಸ್ ಅಧೀಕ್ಷಕ (ASP) ತಿಮ್ಮಯ್ಯ ಅವರು ಅನಾರೋಗ್ಯದಿಂದ ಇಂದು ಅಕ್ಟೋಬರ್ 10ರಂದು ಶನಿವಾರ ನಿಧನರಾಗಿದ್ದಾರೆ.
News

ಬೆಳ್ತಂಗಡಿಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ಯುವ ಸಂಸತ್ತು–2026

ಯುವ ಸಮುದಾಯ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ದೇಶದ ಸಂಸದೀಯ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಮಟ್ಟದ ಯುವ ಸಂಸತ್ತು–2026 ಕಾರ್ಯಕ್ರಮ ಅಕ್ಟೋಬರ್ 8ರಂದು

You cannot copy content of this page