ರಕ್ತದಾನದಿಂದ ಜೀವ ಉಳಿಸುವ ಸಂಕಲ್ಪ – ಮಂಗಳೂರಿನಲ್ಲಿ 350ಕ್ಕೂ ಅಧಿಕ ಮಂದಿಯಿಂದ ರಕ್ತದಾನ
ಶಾಸಕ ವೇದವ್ಯಾಸ ಕಾಮತ್ ಸಹಿತ ಯುವ ಮೋರ್ಚಾ ಕಾರ್ಯಕರ್ತರಿಂದ ಸೇವಾ ಸಂಕಲ್ಪ ಅಭಿಯಾನಕ್ಕೆ ರಕ್ತದಾನದ ಕೊಡುಗೆ

ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಜನಸೇವೆಯ ಅಂಗವಾಗಿ ಹಮ್ಮಿಕೊಳ್ಳಲಾದ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಯುವ ಮೋರ್ಚಾ ವತಿಯಿಂದ ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸಹಯೋಗದಲ್ಲಿ ಅಕ್ಟೋಬರ್ 11ರಂದು ಭಾನುವಾರ ನಗರದ ರೆಡ್ಕ್ರಾಸ್ ಶತಮಾನೋತ್ಸವ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಸೇರಿದಂತೆ 350ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.



ಶಿಬಿರವನ್ನು ಉದ್ಘಾಟಿಸಿದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಜನಸೇವೆ ದೇಶದ ಜನತೆಗೆ ಪ್ರೇರಣೆಯಾಗಿದೆ. ಅವರ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಯುವ ಮೋರ್ಚಾ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಇತರರ ಜೀವ ಉಳಿಸುವ ಸಂಕಲ್ಪ ಕೈಗೊಂಡಿದ್ದಾರೆ ಎಂದರು.

ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ, ಲೇಡಿಗೋಷನ್ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳಿಗೆ ಅಗತ್ಯವಿದ್ದಾಗ ರೆಡ್ಕ್ರಾಸ್ ವತಿಯಿಂದ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ರಕ್ತದ ಕೊರತೆಯನ್ನು ನೀಗಿಸಲು ಸಂಘ-ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಬೇಕು. ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. MLC ಕಿಶೋರ್ ಕುಮಾರ್ ಪುತ್ತೂರು, ಮಾಜಿ MLC ಕೆ. ಮೋನಪ್ಪ ಭಂಡಾರಿ, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ನಿತಿನ್ ಕುಮಾರ್, ನಂದನ್ ಮಲ್ಯ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ರಾಜ್ಗೋಪಾಲ್ ರೈ, ಪೂರ್ಣಿಮಾ, ಕಿಶೋರ್ ಕೊಟ್ಟಾರಿ ಹಾಗೂ ರೆಡ್ಕ್ರಾಸ್ ಸೊಸೈಟಿಯ ನಿರ್ದೇಶಕರಾದ ಗುರುದತ್ ನಾಯಕ್, ರಾಘವೇಂದ್ರ ರಾವ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮತ್ತು ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಅಶ್ವಿತ್ ಕೊಟ್ಟಾರಿ ಸ್ವಾಗತಿಸಿದರು. ಮೌನೀಶ್ ಚೌಟ ವಂದಿಸಿದರು. ಋತ್ವಿಕ್ ಕದ್ರಿ ಕಾರ್ಯಕ್ರಮ ನಿರೂಪಿಸಿದರು.



