October 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಜೀರು ಚರ್ಚ್ ನಲ್ಲಿ ಉಚಿತ ಆರೋಗ್ಯ ಶಿಬಿರ

ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಹಾಗೂ ವಿವಿಧ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಪಜೀರು ಚರ್ಚ್ ಹಾಲ್‌ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಮರ್ಸಿಯಮ್ಮನವರ ಚರ್ಚ್ ಪಜೀರು, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಹಾಗೂ ಸಿಒಡಿಪಿ ಪ್ರವರ್ತಿತ ಸ್ನೇಹಾ ಮಹಾಸಂಘ, ಪಜೀರು ಮತ್ತು ವಿವಿಧ ಆಯೋಗಗಳ ಸಹಯೋಗದಲ್ಲಿ ಈ ಶಿಬಿರ ನಡೆಯಿತು.

ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂದನೀಯ ಫಾದರ್ ಜೋಸೆಫ್ ಮಸ್ಕರೇನಸ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಜಾನೇಶ್ವರಿ ಅವರು ವಿವಿಧ ರೀತಿಯ ಕ್ಯಾನ್ಸರ್ ಕಾಯಿಲೆಗಳು, ಅವುಗಳ ಕುರಿತು ಜಾಗೃತಿ ಮತ್ತು ತಪಾಸಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ಪರೀಕ್ಷೆ, ಚರ್ಮರೋಗ ತಪಾಸಣೆ, ಸ್ತ್ರೀರೋಗ ತಪಾಸಣೆ ಹಾಗೂ ಬಾಯಿಯ ಕ್ಯಾನ್ಸರ್ ತಪಾಸಣೆ ಸೇರಿದಂತೆ ಒಟ್ಟು 10 ವಿಧದ ಆರೋಗ್ಯ ಪರೀಕ್ಷೆಗಳನ್ನು ನಡೆಸಲಾಯಿತು. ಸುಮಾರು 400 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮದಲ್ಲಿ ಚರ್ಚ್ ಸಮಿತಿಯ ಪದಾಧಿಕಾರಿಗಳು, ವಿವಿಧ ಆಯೋಗಗಳ ಪ್ರತಿನಿಧಿಗಳು, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಿಬ್ಬಂದಿ, ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಸಿಬ್ಬಂದಿ ಹಾಗೂ ಸಿಒಡಿಪಿ ಪ್ರವರ್ತಿತ ಸ್ನೇಹಾ ಮಹಾಸಂಘ, ಪಜೀರುವಿನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಆರೋಗ್ಯ ತಪಾಸಣೆಯ ಮೂಲಕ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಲು ಹಾಗೂ ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಈ ಶಿಬಿರ ಸಹಕಾರಿಯಾಯಿತು.

You may also like

News

ಹಿರಿಯ ಆಟೋ ಚಾಲಕ, ಕಬಡ್ಡಿ ಪಟು ಶುಕುರು ಸಾಹೇಬ್ ನಿಧನ

ಬಂಟ್ವಾಳ: ನೇರಳಕಟ್ಟೆ ಸಮೀಪದ ಭಗವಂತಕೋಡಿ ನಿವಾಸಿ, ಹಿರಿಯ ಆಟೋ ಚಾಲಕ ಹಾಗೂ ಉತ್ತಮ ಕಬಡ್ಡಿ ಪಟುವಾಗಿದ್ದ 58 ವರ್ಷ ಪ್ರಾಯದ ಶುಕುರು ಸಾಹೇಬ್ ಅವರು ಹೃದಯಾಘಾತದಿಂದ ಇಂದು
News

6 ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ್ – ಡಾ. ಸುಧಾ ಯಾದವ್‌ ಅವರಿಗೆ ಕರ್ನಾಟಕದ ಹೊಣೆ

ಕರ್ನಾಟಕ ಸೇರಿದಂತೆ ದೇಶದ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ

You cannot copy content of this page