October 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರ್ನಾಟಕದ 20ನೇ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆ

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಅವರು ಇಂದು ಅಕ್ಟೋಬರ್ 16ರಂದು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಅವರು ಕರ್ನಾಟಕದ 20ನೇ ರಾಜ್ಯಪಾಲೆಯಾಗಿ ಹಾಗೂ ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಂಗಳೂರಿನ ಲೋಕಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಾದ ವಿಭು ಬಖ್ರು ಅವರು ಡಾ. ಸುಧಾ ಯಾದವ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಗಣ್ಯರು ಮತ್ತು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಈ ಸಮಾರಂಭದೊಂದಿಗೆ ರಾಜ್ಯದಲ್ಲಿ ಹೊಸ ರಾಜ್ಯಪಾಲರ ಆಡಳಿತಾವಧಿ ಆರಂಭಗೊಂಡಿತು.

ಪ್ರಮಾಣವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಸನ್ಮಾನ್ಯ ಡಿ.ಕೆ. ಶಿವಕುಮಾರ್, ನಿರ್ಗಮಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು, ಹಿರಿಯ ಅಧಿಕಾರಿಗಳು ಹಾಗೂ ಆಹ್ವಾನಿತರು ಉಪಸ್ಥಿತರಿದ್ದರು.

ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲೆ:

ಕರ್ನಾಟಕದ ರಾಜ್ಯಪಾಲರ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ರಾಜ್ಯಪಾಲೆಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಡಾ. ಸುಧಾ ಯಾದವ್ ಅವರು ಈ ಹುದ್ದೆಯನ್ನು ಅಲಂಕರಿಸುವ ಮೂಲಕ ರಾಜ್ಯದ ಎರಡನೇ ಮಹಿಳಾ ರಾಜ್ಯಪಾಲೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ರಾಜ್ಯಪಾಲರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿದ್ದು, ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಆಡಳಿತ ವ್ಯವಸ್ಥೆ ಕಾರ್ಯನಿರ್ವಹಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ. ನೂತನ ರಾಜ್ಯಪಾಲರ ಅಧಿಕಾರ ಸ್ವೀಕಾರದೊಂದಿಗೆ ಕರ್ನಾಟಕದ ಸಾಂವಿಧಾನಿಕ ಆಡಳಿತ ವ್ಯವಸ್ಥೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page