October 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

MRPL ಸ್ಫೋಟದಲ್ಲಿ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವಾ ಸಾವು – 17 ದಿನಗಳ ಚಿಕಿತ್ಸೆ ವಿಫಲ

MRPLನಲ್ಲಿ ಸೆಪ್ಟೆಂಬರ್ 30ರಂದು ಸಂಭವಿಸಿದ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗುತ್ತಿಗೆ ಕಾರ್ಮಿಕ ರಾಜೇಶ್ ಡಿಸಿಲ್ವಾ ಅವರು 17 ದಿನಗಳ ಚಿಕಿತ್ಸೆಯ ಬಳಿಕ ಇಂದು ಅಕ್ಟೋಬರ್ 17ರಂದು ಶನಿವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ.

ಸುರತ್ಕಲ್ ಸಮೀಪದ ಇಡ್ಯ ಗ್ರಾಮದ ಕಾನ ನಿವಾಸಿಯಾಗಿದ್ದ ರಾಜೇಶ್ ಅವರು ಹಲವು ವರ್ಷಗಳಿಂದ MRPL ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಸ್ಫೋಟದಲ್ಲಿ ತೀವ್ರ ಸುಟ್ಟ ಗಾಯಗಳಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ವೈದ್ಯರ ಸತತ ಪ್ರಯತ್ನಗಳ ಹೊರತಾಗಿಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಸೆಪ್ಟೆಂಬರ್ 30ರಂದು ಎಂಆರ್‌ಪಿಎಲ್‌ನ ಮೂರನೇ ಹಂತದಲ್ಲಿರುವ ಕೋಕರ್ ಹೈಡ್ರೋ ಟ್ರೀಟಿಂಗ್ ಯುನಿಟ್‌ (CHTU) ಘಟಕದಲ್ಲಿ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಹಳೆಯಂಗಡಿ ನಿವಾಸಿ ಮನೀಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ರಾಜೇಶ್ ಅವರೂ ಮೃತಪಟ್ಟಿದ್ದಾರೆ.

ಬ್ಯಾಪ್ಟಿಸ್ಟ್ ಡಿಸಿಲ್ವಾ ಅವರ ಐವರು ಮಕ್ಕಳಲ್ಲಿ ಒಬ್ಬರಾಗಿದ್ದ ರಾಜೇಶ್ ಅವಿವಾಹಿತರಾಗಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಿ, ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page