October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಕ್ಕಡ ಹಾಗೂ ಸೌತಡ್ಕ ಅಂಗಡಿಗಳಲ್ಲಿ ಗಲಾಟೆ – ಧರ್ಮಸ್ಥಳ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

ಬೆಳ್ತಂಗಡಿ: ಕೊಕ್ಕಡ ಮತ್ತು ಸೌತಡ್ಕ ಪ್ರದೇಶಗಳಲ್ಲಿ ಅಂಗಡಿಗಳಿಗೆ ಅಕ್ರಮ ಪ್ರವೇಶ, ಸೊತ್ತುಗಳಿಗೆ ಹಾನಿ, ಹಲ್ಲೆ ಹಾಗೂ ಜೀವ ಬೆದರಿಕೆ ಒಡ್ಡಿದ ಆರೋಪಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಪ್ರಕರಣಗಳ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೊಕ್ಕಡದಲ್ಲಿ ಅಂಗಡಿಗೆ ನುಗ್ಗಿ ಹಲ್ಲೆ ಆರೋಪ:

ಕೊಕ್ಕಡ ನಿವಾಸಿ ಕೃಷ್ಣ ಭಟ್ ಅವರು ನೀಡಿದ ದೂರಿನ ಪ್ರಕಾರ, ಇಂದು ಅಕ್ಟೋಬರ್ 18ರಂದು ಭಾನುವಾರ ಬೆಳಿಗ್ಗೆ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ನ ಕಟ್ಟಡದಲ್ಲಿರುವ ಅಂಗಡಿಯಲ್ಲಿ ರಾಘವ ಭಂಡಾರಿ ಮತ್ತು ಅವರ ಕೆಲಸಗಾರರು ವ್ಯಾಪಾರ ನಡೆಸುತ್ತಿದ್ದಾಗ, ಈ ಹಿಂದೆ ಅಲ್ಲಿ ವ್ಯಾಪಾರ ಮಾಡುತ್ತಿದ್ದ ಹರೀಶ್, ಅವರ ಪತ್ನಿ, ಮಕ್ಕಳು ಹಾಗೂ ಇತರರು ಅಂಗಡಿಗೆ ಏಕಾಏಕಿ ಪ್ರವೇಶಿಸಿ ಸುಮಾರು ₹25,000 ಮೌಲ್ಯದ ಕಟ್ಟಡ ಮತ್ತು ಸ್ವತ್ತುಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ರಾಘವ ಭಂಡಾರಿ ಹಾಗೂ ಅವರ ಕೆಲಸಗಾರರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 78/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) 2023ರ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ.

ಸೌತಡ್ಕದಲ್ಲೂ ಹಲ್ಲೆ ಹಾಗೂ ಸೊತ್ತು ಹಾನಿ ಆರೋಪ:

ಇನ್ನೊಂದು ಪ್ರಕರಣದಲ್ಲಿ, ಸೌತಡ್ಕ ದೇವಸ್ಥಾನದ ಸಮೀಪ ಅಂಗಡಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಹರಿಶ್ಚಂದ್ರ ಅವರ ಅಂಗಡಿಗೆ ರಾಘವ ಭಂಡಾರಿ, ಲಿಂಗಪ್ಪ, ಕಿಶೋರ್ ಮತ್ತು ಚೇತನ್ ಎಂಬವರು ಅಕ್ರಮವಾಗಿ ಪ್ರವೇಶಿಸಿ, ಅಂಗಡಿಯ ಸೊತ್ತುಗಳನ್ನು ಹೊರಗೆ ಎಸೆದು ಹಾನಿ ಮಾಡಿದ್ದಾರೆ ಎಂದು ಹರಿಶ್ಚಂದ್ರ ಅವರ ಪತ್ನಿ ದೂರು ನೀಡಿದ್ದಾರೆ.

ಅಲ್ಲದೆ, ಹರಿಶ್ಚಂದ್ರ, ಅವರ ಪತ್ನಿ ಹಾಗೂ ಕೆಲಸಗಾರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಅನುಚಿತವಾಗಿ ವರ್ತಿಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 79/2026ರಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) 2023ರ ವಿವಿಧ ಕಲಂಗಳಡಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ. ಎರಡೂ ಪ್ರಕರಣಗಳ ಕುರಿತು ಧರ್ಮಸ್ಥಳ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಗಳ ಸತ್ಯಾಸತ್ಯತೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page