October 23, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್ ಬಸ್‌ಗೆ ಪ್ರವಾಸಿ ಮಿನಿ ಬಸ್ ಡಿಕ್ಕಿ – ಚಾಲಕ ಸೇರಿ 13 ವಿದ್ಯಾರ್ಥಿಗಳಿಗೆ ಗಾಯ

ಗಾಯಾಳುಗಳಿಗೆ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಲ್ಕಿಯ ಕೊಲ್ನಾಡು ಬಳಿ ಪ್ರವಾಸಿ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಶಾಲಾ ಬಸ್ ಚರಂಡಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಘಟನೆ ಇಂದು ಅಕ್ಟೋಬರ್ 23ರಂದು ಶುಕ್ರವಾರ ಸಂಜೆ ಸುಂದರರಾಮ್ ಶೆಟ್ಟಿ ಸಭಾಂಗಣದ ಸಮೀಪ ನಡೆದಿದೆ.

ಪೊಲೀಸರ ಪ್ರಕಟಣೆಯ ಪ್ರಕಾರ, ಮುಲ್ಕಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೆಂಗಳೂರಿನ SRS ಟೂರಿಸ್ಟ್ ಸಂಸ್ಥೆಗೆ ಸೇರಿದ KA-01-AR-1655 ನೋಂದಣಿ ಸಂಖ್ಯೆಯ ಮಿನಿ ಬಸ್ ಅನ್ನು ಚಾಲಕ ದೇವರಾಜ್ ಚಲಾಯಿಸುತ್ತಿದ್ದರು. ಈ ವೇಳೆ ರಸ್ತೆಬದಿಯಲ್ಲಿ ನಿಂತಿದ್ದ ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಶಾಲಾ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಶಾಲಾ ಬಸ್ ನಿಯಂತ್ರಣ ತಪ್ಪಿ ಸಮೀಪದ ಚರಂಡಿಗೆ ಬಿದ್ದಿದೆ. ಶಾಲಾ ಬಸ್ ಚಾಲಕ ದೇವದಾಸ್ ಹಾಗೂ 13 ವಿದ್ಯಾರ್ಥಿಗಳಿಗೆ ಸಾಮಾನ್ಯ ಗಾಯಗಳಾಗಿದ್ದು, ಗಾಯಾಳುಗಳು ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 248/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಕಲಂ 281 ಮತ್ತು 125(ಎ)ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

You may also like

News

1 ವರ್ಷ 1 ತಿಂಗಳ ಪುಟಾಣಿ ಚಾರ್ವಿಕ್‌ ವಿಶ್ವದಾಖಲೆ – 2 ನಿಮಿಷ 40 ಸೆಕೆಂಡುಗಳಲ್ಲಿ 40 ಮೆಟ್ಟಿಲು ಹತ್ತಿ ಅಂತಾರಾಷ್ಟ್ರೀಯ ಮನ್ನಣೆ!

ಮಂಗಳೂರಿನ ದೀಪಕ್ ಶೆಟ್ಟಿ ಹಾಗೂ ವಿನುತಾ ಶೆಟ್ಟಿ ದಂಪತಿಯ ಪುತ್ರನಿಗೆ ‘ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ ಗೌರವ – ‘ಸೂಪರ್ ಟ್ಯಾಲೆಂಟೆಡ್ ಕಿಡ್’ ಪ್ರಶಸ್ತಿಗೆ ಪಾತ್ರ ಅಂಬೆಗಾಲಿಡುವ
News

ಅಕ್ಟೋಬರ್ 24ರಂದು ಧರ್ಮಸ್ಥಳದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

ವಿಶೇಷ ಪೂಜೆ ಮತ್ತು ಹಿರಿಯ ನೌಕರರಿಗೆ ಸನ್ಮಾನ – ಎರಡು ತಿಂಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಸಂಭ್ರಮದ ಸಮಾರೋಪ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.

You cannot copy content of this page