October 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಣಕಾಸಿನ ಜಗಳ ವಿಕೋಪಕ್ಕೆ; ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ – ರಿಕ್ಷಾ ಚಾಲಕ ಪ್ರಮೋದ್‌ ಬಂಧನ

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಜಗಳ ವಿಕೋಪಕ್ಕೆ ತಿರುಗಿದ ಪರಿಣಾಮ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ರೌಡಿಶೀಟರ್ 43 ವರ್ಷ ಪ್ರಾಯದ ಸುಜಿತ್ ಪಿಂಟೋ ಅವರನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಅಕ್ಟೋಬರ್ 27ರ ಮಂಗಳವಾರ ರಾತ್ರಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಷಾ ಚಾಲಕ ಪ್ರಮೋದ್‌ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್ ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಮೋದ್  ಸುಜಿತ್ ಪಿಂಟೋ ಅವರ ಮನೆಗೆ ದಿನಸಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಪೂರೈಸುತ್ತಿದ್ದನು. ಈ ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಜಿತ್ ಪಿಂಟೋ ಪ್ರಮೋದ್‌ಗೆ ಹಣ ಪಾವತಿಸಬೇಕಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಪ್ರಮೋದ್ ಸುಜಿತ್ ಅವರನ್ನು ತಾನು ಇದ್ದ ಶೋರೂಮ್ ಸಮೀಪಕ್ಕೆ ಬರುವಂತೆ ಕರೆಸಿಕೊಂಡಿದ್ದನು. ಅದರಂತೆ ಅಲ್ಲಿಗೆ ತೆರಳಿದ್ದ ಇಬ್ಬರ ನಡುವೆ ಮದ್ಯದ ಅಮಲಿನಲ್ಲಿ ಜಗಳ ನಡೆದಿದ್ದು, ಈ ವೇಳೆ ಆಕ್ರೋಶಗೊಂಡ ಪ್ರಮೋದ್ ಕಬ್ಬಿಣದ ರಾಡ್‌ನಿಂದ ಸುಜಿತ್ ಅವರ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಸುಜಿತ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಸುಜಿತ್ ಪಿಂಟೋ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 2018ರಲ್ಲಿ ಮಣಿಪಾಲದಲ್ಲಿ ನಡೆದ ಕ್ಲಬ್ ಮಾಲೀಕ ಗುರುಪ್ರಸಾದ್ ಭಟ್ ಹತ್ಯೆ ಪ್ರಕರಣ ಹಾಗೂ 2020ರಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಲಕ್ಷ್ಮೀನಗರದಲ್ಲಿ ನಡೆದ ಯೋಗೀಶ್ ಪೂಜಾರಿ ಕೊಲೆ ಪ್ರಕರಣಗಳಲ್ಲಿಯೂ ಸುಜಿತ್ ಆರೋಪಿಯಾಗಿದ್ದನು ಎಂದು ವರದಿಯಾಗಿದೆ.

ಸುಜಿತ್ ಪಿಂಟೋ ಈ ಹಿಂದೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸಂತೆಕಟ್ಟೆಯಲ್ಲಿ ವಾಸವಾಗಿದ್ದು, ಕೆಲವು ವರ್ಷಗಳ ಹಿಂದೆ ಬ್ರಹ್ಮಾವರಕ್ಕೆ ಸ್ಥಳಾಂತರಗೊಂಡಿದ್ದನು ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಹರಿರಾಂ ಶಂಕರ್, ಡಿವೈಎಸ್ಪಿ ಬೆಳ್ಳಿಯಪ್ಪ ಹಾಗೂ ಬ್ರಹ್ಮಾವರ ವೃತ್ತ ನಿರೀಕ್ಷಕ ಗೋಪಿಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

You may also like

News

12 ದಿನ, 12 ಗಂಟೆ, 12 ನಿಮಿಷಗಳ ನಿರಂತರ ಸಮೂಹ ಗಾಯನ – ಗಿನ್ನೆಸ್ ವಿಶ್ವ ದಾಖಲೆಗೆ ಮಂಗಳೂರಿನ ಮಾಂಡ್ ಸೊಭಾಣ್ ಸಜ್ಜು!

ಕೊಂಕಣಿ ಸಂಗೀತದ ಶ್ರೀಮಂತ ಪರಂಪರೆಯನ್ನು ಜಗತ್ತಿಗೆ ಪರಿಚಯಿಸುವ ಮಹಾ ಸಮ್ಮೇಳನ – ಅಧ್ಯಕ್ಷ ಲುವಿ ಜೆ. ಪಿಂಟೊ ಕೊಂಕಣಿ ಭಾಷೆ, ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ವಿಶ್ವಮಟ್ಟದಲ್ಲಿ
News

ದೇರಳಕಟ್ಟೆಯ ಫಾದರ್ ಮುಲ್ಲರ್ ಕಾಲೇಜು ಕ್ಯಾಂಪಸ್‌ನಲ್ಲಿ ‘ಪ್ರೇರಣಾ ವಿಜ್ಞಾನೋತ್ಸವ–2026’ ಉದ್ಘಾಟನೆ

ದೇರಳಕಟ್ಟೆಯ ಫಾದರ್ ಮುಲ್ಲರ್ ಕಾಲೇಜು  ಕ್ಯಾಂಪಸ್‌ನಲ್ಲಿ  ಪ್ರೇರಣಾ ವಿಜ್ಞಾನೋತ್ಸವ 2026 ಅನ್ನು ಅಕ್ಟೋಬರ್ 27 ರಂದು ಉದ್ಘಾಟಿಸಲಾಯಿತು. ಈ ವಿಜ್ಞಾನೋತ್ಸವವನ್ನು ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು

You cannot copy content of this page