November 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನಲ್ಲಿ BEO ಆಗಿದ್ದ ಸಿ. ಲೋಕೇಶ್‌ ಅವರಿಗೆ ಪದೋನ್ನತಿ ಭಾಗ್ಯ

ಪ್ರಾಮಾಣಿಕ ಸೇವೆಗೆ ಬೆಂಗಳೂರಿನಲ್ಲಿ ಜಂಟಿ ನಿರ್ದೇಶಕ ಹುದ್ದೆಯ ಗೌರವ!

ಶಿಕ್ಷಣ ಇಲಾಖೆಯಲ್ಲಿ ನಿಷ್ಠಾವಂತ, ಪ್ರಾಮಾಣಿಕ ಹಾಗೂ ಸೇವಾ ಮನೋಭಾವದ ಅಧಿಕಾರಿಯಾಗಿ ಗುರುತಿಸಿಕೊಂಡಿರುವ, ಈ ಹಿಂದೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಸಿ. ಲೋಕೇಶ್ ಅವರು ಪದೋನ್ನತಿ ಹೊಂದಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ಜಂಟಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

ಸುದೀರ್ಘ ಸೇವಾವಧಿಯಲ್ಲಿ ತಮ್ಮ ಕರ್ತವ್ಯನಿಷ್ಠೆ, ದಕ್ಷ ಆಡಳಿತ ಹಾಗೂ ಜನಪರ ಕಾರ್ಯವೈಖರಿಯ ಮೂಲಕ ವಿಶೇಷ ಗುರುತನ್ನು ಗಳಿಸಿರುವ ಸಿ. ಲೋಕೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2008ರಿಂದ ಡಯಟ್ ಉಪನ್ಯಾಸಕರಾಗಿ ತಮ್ಮ ಸೇವೆಯನ್ನು ಆರಂಭಿಸಿದ್ದರು. ಬಳಿಕ ಜಿಲ್ಲೆಯ ಐದು ತಾಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಶಿಕ್ಷಣ ಇಲಾಖೆಯ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ.

ಸಮಗ್ರ ಶಿಕ್ಷಣ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಅವರು, ಹೆಚ್ಚುವರಿ ಪ್ರಭಾರದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪ್ರಭಾರ ಆಡಳಿತಾಧಿಕಾರಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ. ವಿವಿಧ ಜಿಲ್ಲಾ ಮಟ್ಟದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಮೂಲಕ ಆಡಳಿತಾತ್ಮಕ ಅನುಭವ ಮತ್ತು ಸೇವಾ ಬದ್ಧತೆಯನ್ನು ಮೆರೆದಿದ್ದಾರೆ.

ಪುತ್ತೂರಿನಿಂದ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡ ಬಳಿಕ ಉಪನಿರ್ದೇಶಕರಾಗಿ ಪದೋನ್ನತಿ ಹೊಂದಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸಿದ್ದರು. ನಂತರ ಉಡುಪಿ ಜಿಲ್ಲಾ ಉಪನಿರ್ದೇಶಕರಾಗಿ ವರ್ಗಾವಣೆಗೊಂಡು ಜವಾಬ್ದಾರಿ ನಿರ್ವಹಿಸಿದ್ದರು.

ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಆಡಳಿತಾತ್ಮಕ ದಕ್ಷತೆ ಹಾಗೂ ಸಾರ್ವಜನಿಕ ಸೇವೆಗೆ ಸದಾ ಆದ್ಯತೆ ನೀಡುತ್ತಾ ಬಂದಿರುವ ಸಿ. ಲೋಕೇಶ್ ಅವರ ವೃತ್ತಿಪರ ನಿಷ್ಠೆ, ಪ್ರಾಮಾಣಿಕತೆ ಮತ್ತು ಕರ್ತವ್ಯಬದ್ಧ ಸೇವೆಗೆ ಇದೀಗ ಉನ್ನತ ಮನ್ನಣೆ ದೊರೆತಿದೆ. ಅವರು ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯ ಜಂಟಿ ನಿರ್ದೇಶಕರಾಗಿ ಪದೋನ್ನತಿ ಹೊಂದಿರುವುದು ಅವರ ಸುದೀರ್ಘ ಸೇವಾನುಭವ ಹಾಗೂ ದಕ್ಷ ಕಾರ್ಯವೈಖರಿಗೆ ಸಂದ ಗೌರವವಾಗಿದೆ.

ನಿಷ್ಠಾವಂತ ಕರ್ತವ್ಯ ನಿರ್ವಹಣೆ, ಪಾರದರ್ಶಕ ಆಡಳಿತ ಮತ್ತು ಸೇವಾ ಮನೋಭಾವದ ಮೂಲಕ ಗುರುತಿಸಿಕೊಂಡಿರುವ ಸಿ. ಲೋಕೇಶ್ ಅವರ ಈ ಸಾಧನೆ ಶಿಕ್ಷಣ ಇಲಾಖೆಯ ವಲಯದಲ್ಲಿ ಸಂತಸ ಮೂಡಿಸಿದೆ. ಅವರ ಮುಂದಿನ ವೃತ್ತಿಜೀವನ ಮತ್ತಷ್ಟು ಯಶಸ್ಸು ಮತ್ತು ಸಾಧನೆಗಳಿಂದ ಕೂಡಿರಲಿ ಎಂಬ ಹಾರೈಕೆಗಳು ವ್ಯಕ್ತವಾಗಿವೆ.

You may also like

News

ಮಂಗಳೂರಿನ ಹಲವೆಡೆ ಗಾಂಜಾ ಮಾರಾಟ – ಆರೋಪಿ ಬಂಧನ

ಕಾರು ಹಾಗೂ ಮೊಬೈಲ್ ಸಹಿತ ₹3.94 ಲಕ್ಷದ ಸೊತ್ತು ವಶ ಮಂಗಳೂರು ನಗರದಲ್ಲಿ ಅಕ್ರಮ ಮಾದಕವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಮಂಗಳೂರು ಪೊಲೀಸರು, ಗಾಂಜಾ
News

FMCI MoU with SSVP Mangalore Central Council to Extend Credit-Based Healthcare to Needy Families

In a significant step towards making quality healthcare accessible to economically disadvantaged families, Father Muller Charitable Institutions (FMCI) signed a

You cannot copy content of this page