ಸಾಧಕರಿಗೆ ಸನ್ಮಾನ ಹಾಗೂ ಸೌಹಾರ್ದತೆಗೆ ಸಂಭ್ರಮದ ವೇದಿಕೆ – MPMLA NEWS ಇದರ 14ನೇ ಸೌಹಾರ್ದ ಸಂಗಮ
ನಾಳೆ ನವಂಬರ್ 24ರಂದು ಮಂಗಳೂರು ಟೌನ್ಹಾಲ್ನಲ್ಲಿ ಅದ್ದೂರಿ ಕಾರ್ಯಕ್ರಮ

ಮಂಗಳೂರು: ಸಮಾಜದಲ್ಲಿ ಸೌಹಾರ್ದತೆ, ಮಾನವೀಯ ಮೌಲ್ಯಗಳು ಮತ್ತು ಸೇವಾ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಡಾ. ಅಶೋಕ್ ಶೆಟ್ಟಿ ಬಿ.ಎನ್. ಅವರ ಸಾರಥ್ಯದ MPMLA NEWS ವತಿಯಿಂದ ಆಯೋಜಿಸಲಾಗುತ್ತಿರುವ 14ನೇ ಸೌಹಾರ್ದ ಸಂಗಮವು ನವೆಂಬರ್ 24ರಂದು ಮಂಗಳವಾರ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನ (ಟೌನ್ಹಾಲ್)ದಲ್ಲಿ ನಡೆಯಲಿದೆ. ಸಂಜೆ 4ರಿಂದ ರಾತ್ರಿ 9ರವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ, ಗಣ್ಯರ ಸನ್ಮಾನ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ.ಎನ್. ಅವರು ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡರು.


ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ:
ಸೌಹಾರ್ದ ಸಂಗಮದ ಅಂಗವಾಗಿ ಸಮಾಜ, ಜನಸೇವೆ, ಆಡಳಿತ ಮತ್ತು ವೈದ್ಯಕೀಯ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು.
- ಸಮಾಜ ರತ್ನ ಪ್ರಶಸ್ತಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ.
- ಜನಸೇವಾ ಪ್ರಶಸ್ತಿ: ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯು.ಟಿ. ಖಾದರ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಮಾಜಿ ಸಂಸದ ಹಾಗೂ ಬಿಜೆಪಿ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್.
- ಬೆಸ್ಟ್ ಆಫೀಸರ್ಸ್ ಅವಾರ್ಡ್: KSRTC ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ.
- ಬೆಸ್ಟ್ ಡಾಕ್ಟರ್ಸ್ ಅವಾರ್ಡ್: ಮಂಗಳೂರು KMC ಆಸ್ಪತ್ರೆಯ ಹೆಚ್ಚುವರಿ ಪ್ರಾಧ್ಯಾಪಕಿ, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಹಾಗೂ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಕಿ ಡಾ. ನೀನಾ ಎ. ಮಹಾಲೆ.



ಗಣ್ಯರಿಂದ ಉದ್ಘಾಟನೆ – ಬಿ. ರಮಾನಾಥ ರೈ ಅಧ್ಯಕ್ಷತೆ:
14ನೇ ಸೌಹಾರ್ದ ಸಂಗಮವನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಮಾಲಾಡಿ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಡಾ. ಎ. ಸದಾನಂದ ಶೆಟ್ಟಿ ಹಾಗೂ ಮಂಗಳೂರಿನ ಹಿರಿಯ ನ್ಯಾಯವಾದಿ ಕೆ. ದಯಾನಂದ ರೈ ಉದ್ಘಾಟಿಸಲಿದ್ದಾರೆ.
ಮಾಜಿ ಸಚಿವ ಬಿ. ರಮಾನಾಥ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಅಸ್ರಣ್ಣ ಆಶೀರ್ವಚನ ನೀಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಆರ್ಬಿಐ ಉತ್ತರ ವಲಯದ ಮಾಜಿ ನಿರ್ದೇಶಕ ಸಹಕಾರ ರತ್ನ ಡಾ. ಅಗರಿ ನವೀನ್ ಭಂಡಾರಿ ಹಾಗೂ ಮಂಗಳೂರಿನ ಮಾಜಿ ಮೇಯರ್ ಮತ್ತು ಕಾರ್ಡೋಲೈಟ್ ಕಂಪನಿಯ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ ಸೇರಿದಂತೆ ಹಲವು ಗಣ್ಯರು ಸಾಧಕರನ್ನು ಸನ್ಮಾನಿಸಲಿದ್ದಾರೆ.



ವಿವಿಧ ಕ್ಷೇತ್ರಗಳ ಗಣ್ಯರ ಉಪಸ್ಥಿತಿ:
ಕಾರ್ಯಕ್ರಮದಲ್ಲಿ ಮೂಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ ಎ. ಕೋಟ್ಯಾನ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ಸ್ಟೇಟ್ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಡಾ. ಇಫ್ತಿಕಾರ್ ಅಲಿ, ಮೂಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಹಾಗೂ ಸ್ಮಾರ್ಟ್ ಸಿಟಿ ಮಂಗಳೂರು ಎಂ.ಡಿ. ಡಾ. ಜಿ. ಸಂತೋಷ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಮಂಗಳೂರು ದಕ್ಷಿಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಎಂ. ಬೈಂದೂರು, ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ ಭಾಗವಹಿಸಲಿದ್ದಾರೆ.
ಪತ್ರಿಕೋದ್ಯಮಿ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶ್ ಕೆ. ಪಾಂಡೇಶ್ವರ್, ಜೆಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ್ ಶೆಟ್ಟಿ, ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಉದ್ಯಮಿ ಅಜಿತ್ ಚೌಟ ನೈಜೀರಿಯಾ, ಡೈಜಿ ವರ್ಲ್ಡ್ನ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ, ಎಸ್.ಎಲ್. ಶೇಟ್ ಜ್ಯುವೆಲ್ಲರ್ಸ್ ಆ್ಯಂಡ್ ಡೈಮಂಡ್ ಹೌಸ್ ಮಾಲಕ ಪ್ರಶಾಂತ್ ಶೇಟ್, ಪಿಯೂಸ್ ಎಲ್. ರೊಡ್ರಿಗಸ್ ಹಾಗೂ ಗಂಗಾಧರ ಪಂಡಿತ್ ಉಪಸ್ಥಿತರಿರಲಿದ್ದಾರೆ.

ನ್ಯಾಯವಾದಿಗಳಾದ ಎಂ. ಅಶ್ವನಿ ಕುಮಾರ್ ರೈ, ರಾಮ್ಪ್ರಸಾದ್ ಎಸ್., ಅರುಣ್ ಶೆಟ್ಟಿ ಹಾಗೂ ಮಯೂರ್ ಕೀರ್ತಿ, ಕ್ರೀಡಾ ಬರಹಗಾರ ಎಸ್. ಜಗದೀಶ್ ಚಂದ್ರ ಸೂಟರ್ಪೇಟೆ ಮತ್ತು ವೈದ್ಯರಾದ ಡಾ. ಸುಧಾಕರ್ ಶೆಟ್ಟಿ ಪುಣೆ-ಮೂಡಬಿದಿರೆ, ಡಾ. ಸಂತೋಷ್ ಟಿ. ಸೋನ್ಸ್, ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ, ಡಾ. ಹಂಸರಾಜ್ ಆಳ್ವ, ಡಾ. ಸುಧೀರ್ ಹೆಗ್ಡೆ, ಡಾ. ದೀಪಕ್ ಮಡಿ, ಡಾ. ಸದಾನಂದ ಪೂಜಾರಿ, ಡಾ. ಡಿ. ನರಸಿಂಹ ಪೈ, ಡಾ. ಡಿ. ಶಿವಾನಂದ ಪೈ, ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು, ಡಾ. ಜ್ಯೂಲಿಯನ್ ಸಲ್ಡಾನ ಹಾಗೂ ಡಾ. ರಘರಾಮ್ ಶೆಟ್ಟಿ ಗುಳ್ಳಾಡಿ ಭಾಗವಹಿಸಲಿದ್ದಾರೆ.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ, ಉಪಾಧ್ಯಕ್ಷರಾದ ಆರೀಫ್ ಪಡುಬಿದ್ರಿ ಮತ್ತು ವಿಲ್ಫ್ರೆಡ್ ಡಿಸೋಜ, ಕೋಶಾಧಿಕಾರಿ ವಿಜಯ ಕೋಟ್ಯಾನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ವಿಜಯ ಕರ್ನಾಟಕ ದೈನಿಕದ ಸ್ಥಾನೀಯ ಸಂಪಾದಕ ರವೀಂದ್ರ ಶೆಟ್ಟಿ, ಸಂಯುಕ್ತ ಕರ್ನಾಟಕದ ಮುಖ್ಯ ಸುದ್ದಿ ಬ್ಯೂರೋ ರಾಮಕೃಷ್ಣ ಆರ್., ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಹಾಗೂ ಟಿವಿ5 ರೀಜನಲ್ ಹೆಡ್ ಸುಖಪಾಲ್ ಪೊಳಲಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಗೀತ ರಸಮಂಜರಿ, ತುಳು ನಾಟಕದ ರಸದೌತಣ:
ಸೌಹಾರ್ದ ಸಂಗಮದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ನೀಡಲಿವೆ. ಚಲನಚಿತ್ರ ಗಾಯಕ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವೀಂದ್ರ ಪ್ರಭು ಮತ್ತು ಬಳಗದ ಗಾಯಕ-ಗಾಯಕಿಯರ ‘ರಾಗ್ರಂಗ್’ ತಂಡದಿಂದ ಸೌಹಾರ್ದ ಸಂಗೀತ ರಸಮಂಜರಿ ನಡೆಯಲಿದೆ.
ಸಂಜೆ 6 ಗಂಟೆಗೆ ನರೇಶ್ ಸಸಿಹಿತ್ಲು ಬಳಗದ ತ್ರಿನೇತ್ರ ಕಲಾವಿದರಿಂದ ಈ ವರ್ಷದ ಸೂಪರ್ಹಿಟ್ ತುಳು ನಾಟಕ ‘ಬ್ರಹ್ಮರಕ್ಕಸೆ‘ ಉಚಿತವಾಗಿ ಪ್ರದರ್ಶನಗೊಳ್ಳಲಿದೆ. ಈ ನಾಟಕ ಪ್ರದರ್ಶನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಗಳೂರು ಪ್ರಾಯೋಜಕತ್ವ ನೀಡಲಿದೆ.

ಸಾರ್ವಜನಿಕರಿಗೆ ಉಚಿತ ಪ್ರವೇಶ:
ಸೌಹಾರ್ದತೆ, ಸಮಾಜಸೇವೆ ಮತ್ತು ಸಾಧಕರಿಗೆ ಗೌರವ ಸಲ್ಲಿಸುವ ಉದ್ದೇಶದೊಂದಿಗೆ ಆಯೋಜಿಸಲಾಗಿರುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕ ಡಾ. ಅಶೋಕ್ ಶೆಟ್ಟಿ ಬಿ.ಎನ್. ಅವರು ವಿನಂತಿಸಿದ್ದಾರೆ.
ವಿವಿಧ ಕ್ಷೇತ್ರಗಳ ಸಾಧಕರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವುದರೊಂದಿಗೆ ಕಲೆ, ಸಂಸ್ಕೃತಿ ಮತ್ತು ಸೌಹಾರ್ದತೆಯ ಸಂದೇಶ ಸಾರಲಿರುವ 14ನೇ MPMLA NEWS ಸೌಹಾರ್ದ ಸಂಗಮ ಮಂಗಳೂರಿನ ಸಾಂಸ್ಕೃತಿಕ ಹಾಗೂ ಸಾಮಾಜಿಕ ವಲಯದಲ್ಲಿ ಗಮನ ಸೆಳೆಯುವ ಕಾರ್ಯಕ್ರಮವಾಗಲಿದೆ.





