September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಡಿಕಲ್ ನೇಮಕ

ಮಂಗಳೂರು: ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾಗಿ ಪ್ರಕಾಶ್ ಕೋಡಿಕಲ್ ಅವರನ್ನು ನೇಮಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ದಿನೇಶ್ ಮುಳೂರು ಜನವರಿ 9ರಂದು ಗುರುವಾರ ಆದೇಶಿಸಿದ್ದಾರೆ.

ಕೆಪಿಸಿಸಿ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಆರ್. ಧರ್ಮಸೇನಾ ಅವರ ನಿರ್ದೇಶನದ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮಾರ್ಗದರ್ಶನದ ಮೇರೆಗೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ಶಿಫಾರಸ್ಸಿನಂತೆ ಪ್ರಕಾಶ್ ಕೋಡಿಕಲ್ ಅವರು ನೇಮಕಗೊಂಡಿದ್ದಾರೆ. ಪ್ರಕಾಶ್ ಕೋಡಿಕಲ್ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಸಂಚಾಲಕರಾಗಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದಾರೆ.

You may also like

News

ಕಲ್ಲುಗುಂಡಿ ದರೋಡೆ ಪ್ರಕರಣದಲ್ಲಿ ಶ್ರೀನಿವಾಸ ದೋಷಮುಕ್ತ

ಆರೋಪಿ ಪರ ಪ್ರಖ್ಯಾತ ವಕೀಲರಾದ ಪುತ್ತೂರು ಮಹೇಶ್ ಕಜೆ ಯಶಸ್ವಿ ವಾದ ಪುತ್ತೂರು: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ
News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ

You cannot copy content of this page