September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತ್ರತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಬೆಳ್ತಂಗಡಿ : ಉಜಿರೆ ಬೆನಕ ಆಸ್ಪತ್ರೆಗೆ ಜನವರಿ 13ರಂದು ಚಿತ್ತೈಸಿದ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥಂಗಳು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು.

ನಂತರ ಆಶೀರ್ವಚನ ನೀಡುತ್ತಾ ಉಜಿರೆಯಂತಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದೆಯೂ ಇದೆ ರೀತಿ ನಡೆಸಿಕೊಂಡು ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಹ್ಮಣ್ಯ ಅನುಗ್ರಹ ಸದಾ ಇರಲೆಂದು ಹಾರೈಸಿದರು. ಇದಕ್ಕೂ ಮುನ್ನ ಆಸ್ಪತ್ರೆಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ವೀಕ್ಷಿಸಿ ಪ್ರಶಂಸಿಸಿದರು.

ಶ್ರೀಗಳನ್ನು ಡಾ. ಗೋಪಾಲಕೃಷ್ಣ ಮತ್ತು ಭಾರತಿ ದಂಪತಿಗಳು ಪೂರ್ಣ ಕುಂಭ ಸ್ವಾಗತ ನೀಡಿ ಪಾದಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸೀತಾರಾಮ್ ಭಟ್, ಡಾ. ಆದಿತ್ಯ ರಾವ್, ಡಾ. ಅಂಕಿತಾ ಜಿ. ಭಟ್, ಡಾ. ರೋಹಿತ್ ಜಿ. ಭಟ್ ಮತ್ತು ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page