September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎರಡು ಬೈಕ್ ಗಳ ಮುಖಮುಖಿ ಡಿಕ್ಕಿ – ಸಹ ಪ್ರಯಾಣಿಕೆ ಬಾಲಕಿ ಇಸ್ಮತ್ ಆಯಿಶಾ ಮೃತ್ಯು

ಬಂಟ್ವಾಳ : ಎರಡು ಬೈಕ್ ಗಳ ನಡುವೆ ನಡೆದ ಬೀಕರ ಅಪಘಾತದಿಂದಾಗಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಜನವರಿ 14ರಂದು ಮಂಗಳವಾರ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ  13 ವರ್ಷ ಪ್ರಾಯದ ಇಸ್ಮತ್ ಆಯಿಶಾ ಮೃತಪಟ್ಟ ಬಾಲಕಿ. ಬೈಕ್ ಸವಾರ ಬಾಲಕಿಯ ತಂದೆ ಅಬ್ದುಲ್ ರಹಮಾನ್ ‌ಕೂಡ ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ. ರೋಡ್ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದ್ದು ರಂಜಿತ್ ಗೆ ಕೂಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಘಾತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ‌ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page