July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಲಾನ್ಯಾಸ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಪ್ರಾದೇಶಿಕ ಕಚೇರಿಗೆ ಇಂದು ಜನವರಿ 17ರಂದು ಶುಕ್ರವಾರ ಶಂಕು ಸ್ಥಾಪನೆ ನೆರವೇರಿಸಿ ಕೊಟ್ಟ ಮಾತನ್ನು ಈಡೇರಿಸುವ ಮುಖಾಂತರ ಮುಖ್ಯಮಂತ್ರಿಗಳು ಜನರ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಏಷ್ಯಾದ ಅತ್ಯಂತ ದೊಡ್ಡ ಆರೋಗ್ಯ ವಿಶ್ವವಿದ್ಯಾಲಯ ಆಗಿದೆ. 3.5 ಲಕ್ಷ ವೈದ್ಯ ವಿದ್ಯಾರ್ಥಿಗಳಿರುವ ಅತ್ಯಂತ ದೊಡ್ಡ ಆರೋಗ್ಯ ವಿಶ್ವವಿದ್ಯಾಲಯ ಇದಾಗಿದೆ. ಆದ್ದರಿಂದ ಗುಣಮಟ್ಟದ ವೈದ್ಯರನ್ನು ರೂಪಿಸುವುದರ ಜೊತೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೊಡುಗೆ ಅಪಾರವಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ ಸಿಗುವಂತಾಗಬೇಕು. ಶ್ರೀಮಂತರು ಮತ್ತು ನಮ್ಮಂಥಾ ರಾಜಕಾರಣಿಗಳೂ ಸರ್ಕಾರಿ ಆಸ್ಪತ್ರೆಗೆ ಬರುವಂಥಾಗಬೇಕು ಎನ್ನುವ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಎಂದರು. ಜಿಲ್ಲೆಗೊಂದು ಸರ್ಕಾರಿ ವೈದ್ಯಕೀಯ ಕಾಲೇಜು ಇರಬೇಕು ಎನ್ನುವುದು ನನ್ನ ಗುರಿ. ಮಂಗಳೂರಿನಲ್ಲಿ ಉತ್ತಮ ಆರೋಗ್ಯ ಸೇವೆ ಇದ್ದರೂ ಈ ಜಿಲ್ಲೆಗೂ ಸರ್ಕಾರಿ ವೈದ್ಯಕೀಯ ಕಾಲೇಜಿನ ಅಗತ್ಯ ಇದೆ‌. ಈ ದಿಕ್ಕಿನಲ್ಲೂ ಸರ್ಕಾರ ಯೋಚಿಸಿ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆರೋಗ್ಯ ಸೇವೆ ಸರಳವಾಗಿ ಜನರಿಗೆ ಸಿಗುವ ದಿಕ್ಕಿನಲ್ಲಿ ಸಂಶೋಧನೆಗಳನ್ನು ಹೆಚ್ಚೆಚ್ಚು ನಡೆಸಬೇಕು. ದೇಶದ ಅತ್ಯುತ್ತಮ ಆರೋಗ್ಯ ಸೇವೆ ಬಡವರಿಗೂ ಸುಲಭವಾಗಿ ಸಿಗುವಂತೆ ಮಾಡಬೇಕು ಎಂದು ಕರೆ ನೀಡಿದರು. ಈ ಕ್ಷೇತ್ರದ ಡಿಪ್ಲಮೋ ಮತ್ತು ಇತರೆ ಕೋರ್ಸ್ ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ವೈದ್ಯ ವಿಜ್ಞಾನ ಪದವೀಧರರೂ ಯುವನಿಧಿಗೆ ಅರ್ಹತೆಗಳಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳು ಇತರೆ ಕ್ಷೇತ್ರಗಳಿಗೆ ವಲಸೆ ಹೋಗದೆ ಆರೋಗ್ಯ ಕ್ಷೇತ್ರದಲ್ಲೇ ತಮ್ಮ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.

BPL ಇದ್ದವರಿಗೆ ಉಚಿತ ಸೇವೆ: BPL ಕಾರ್ಡ್ ಇದ್ದವರಿಗೆ ಎಲ್ಲಾ ರೀತಿಯ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಿ ಎನ್ನುವ ಸೂಚನೆಯನ್ನು ವೈದ್ಯಕೀಯ ಕಾಲೇಜುಗಳಿಗೆ ನೀಡಲಾಗಿದೆ ಎಂದು ಅವರು ಹೇಳಿದರು. ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿವೆ. ಕಿಡ್ನಿ ಕಸಿಗೆ 5000 ಮಂದಿ ಸಾಲಿನಲ್ಲಿದ್ದಾರೆ. ಕಿಡ್ನಿ ದಾನಿಗಳು ಸಿಕ್ಕರೆ ನಿತ್ಯ ಕಿಡ್ನಿ ಕಸಿ ಮಾಡುವ ನುರಿತ ವೈದ್ಯರ ತಂಡ ನಮ್ಮಲ್ಲಿದೆ ಎಂದರು. ಇಂದು ನಾನು ಶಂಕುಸ್ಥಾಪನೆ ನೆರವೇರಿಸಿರುವ ಪ್ರಾದೇಶಿಕ ಕಚೇರಿಯ ನಿರ್ಮಾಣ ಮತ್ತು ಕಾರ್ಯಕ್ಷಮತೆ ಎರಡೂ ಗುಣಮಟ್ಟದಲ್ಲಿ ಕೂಡಲಿ ಎಂದು ಸೂಚಿಸಿದರು.

ವೇದಿಕೆಯಲ್ಲಿ ಕರ್ನಾಟಕ ವಿಧಾನ ಸಭಾ ಅಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ದಿನೇಶ್ ಗೂಂಡುರಾವ್, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸಚಿವ ಶರಣ ಪ್ರಕಾಶ್ ಪಾಟೀಲ್, ಶಾಸಕ ಭರತ್ ಶೆಟ್ಟಿ, ಪುತ್ತೂರು ಶಾಸಕ ಅಶೋಕ್ ರೈ, ಎಂಎಲ್ ಸಿ ಮಂಜುನಾಥ್ ಭಂಡಾರಿ ಮತ್ತಿತರು ಉಪಸ್ಥಿತರಿದ್ದರು.

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page