September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ಯಾರ್ಥಿಗೆ UKಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ – ಮೂವರ ಬಂಧನ

ಉಡುಪಿ: ನಗರದಲ್ಲಿ ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬ‌ಂಧಿತ ಆರೋಪಿಗಳನ್ನು 24 ವರ್ಷ ಪ್ರಾಯದ ಸುಮನ್ ಎಸ್., 22 ವರ್ಷ ಪ್ರಾಯದ ಸುಹಾನ್ ಖಾನ್ ಮತ್ತು ಮೊಹಮ್ಮದ್ ಮಹಾಝ್ ಎಂದು ಗುರುತಿಸಲಾಗಿದೆ.

ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು UKಯಲ್ಲಿ ಮಾಡಲು ಬಯಸಿದ್ದರು. ಇವರು ದುಬೈಗೆ ತೆರಳಿ ಅಫ್ತಾಬ್ ನನ್ನು ಭೇಟಿ ಮಾಡಿದ್ದು, ನಂತರ UKಯಲ್ಲಿ M.PH ವಿಧ್ಯಾಭ್ಯಾಸಕ್ಕಾಗಿ ಸೀಟಿಗೆ 18 ಲಕ್ಷಕ್ಕೆ ಇಬ್ಬರ ನಡುವೆ ಒಪ್ಪಂದವಾಗಿತ್ತು. ಅಫ್ತಾಬ್ ವಿದ್ಯಾರ್ಥಿಗೆ ಸೀಟನ್ನು ಖಾಯಂ ಮಾಡಲು ಮೊದಲಿಗೆ 8.5 ಲಕ್ಷ ರೂಪಾಯಿಯನ್ನು ನೀಡುವಂತೆ ಕೇಳಿದ್ದ. ಅದನ್ನು ವಿದ್ಯಾರ್ಥಿ ನೀಡಿದ್ದ. ನಂತರ ಆರೋಪಿಗಳು ವಿದ್ಯಾರ್ಥಿಯ ಕರೆಯನ್ನು ಸ್ವೀಕರಿಸದೇ UKಯಲ್ಲಿ M.PH ವಿಧ್ಯಾಭ್ಯಾಸಕ್ಕೆ ಸೀಟನ್ನೂ ಕೊಡಿಸದೇ ವಂಚಿಸಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದೀಗ ಮೂವರನ್ನು ಬಂಧಿಸಿರುವ ಪೊಲೀಸರು ಅವರಿಂದ 5 ಲಕ್ಷ ರೂಪಾಯಿ ನಗದು, ಇನ್ನೋವಾ ಕಾರು ಮತ್ತು 2 ಮೊಬೈಲ್ ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 9,56,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page