September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭೀಮ್ ರಾವ್ ಸುಂಗಲ್ಕರ್ ಯಾದಗಿರಿ ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ಕಾಸರಗೋಡು : ಸಂಘಟಕ ಸಾಹಿತಿ ಕಲಾವಿದ, ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ ಜನಪ್ರಿಯರಾಗಿರುವ ಭೀಮ್ ರಾವ್ ಸುಂಗಲ್ಕರ್ ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಯಾದಗಿರಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ.

ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರ್ ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ರಾಜ್ಯ ಸಂಚಾಲಕರಾದ ಸಂಘಟಕ ಬಿ. ಶಿವಕುಮಾರ್ ಕೋಲಾರ ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಆಯ್ಕೆಯಾದ ಭೀಮ್ ರಾವ್ ಸುಂಗಲ್ಕರ್ ಇವರು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಸುಮಾರು 20000 ಪುಸ್ತಕಗಳಿರುವ ಸಾರ್ವಜನಿಕ ವಾಚನಾಲಯ, ಕರ್ನಾಟಕದಿಂದ ಕಾಸರಗೋಡು ಪ್ರದೇಶಕ್ಕೆ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿ ಗಳಿಗೆ “ಉಚಿತ ವಸತಿ ಸೌಕರ್ಯ” ಪ್ರತಿ ಮನೆಗೊಂದು ಗ್ರಂಥಾಲಯ, ರಜತ ಸಂಭ್ರಮ ವಿಶೇಷ ಕಾರ್ಯಕ್ರಮ, ಸಂಘಟನೆ, ಸಂಯೋಜನೆಯಲ್ಲಿ ಘಟಕ ವಿಸ್ತರಿಸಿ, ಕಾರ್ಯ ಪ್ರವಿತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಚಾಲಕಿಯಾದ ಸಂದ್ಯಾ ರಾಣಿ ಟೀಚರ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page