September 21, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆರೋಪಿಗಳಿಗೆ ನೋಟಿಸ್ ನೀಡಲು ಪೊಲೀಸರು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ – ಸುಪ್ರೀಂ ಕೋರ್ಟ್

ಪೊಲೀಸರು ಆರೋಪಿಗಳಿಗೆ ನೋಟಿಸ್ ನೀಡಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ. ಈ ರೀತಿ ನೀಡಿದ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ಹೊರಡಿಸಿದ್ದು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 1973ರ ಸಿಆರ್‌ಪಿಸಿ ಸೆಕ್ಷನ್ 41-ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ (ಬಿಎನ್‌ಎಸ್‌ಎಸ್) ಸೆಕ್ಷನ್ 35ರ ಅಡಿಯಲ್ಲಿ ಸೂಚಿಸಲಾದ ಸೇವಾ ವಿಧಾನದ ಮೂಲಕ ಮಾತ್ರ ನೋಟಿಸ್‌ಗಳನ್ನು ಹೊರಡಿಸುವಂತೆ ಪೊಲೀಸರಿಗೆ ನಿರ್ದೇಶಿಸಿದೆ. ಈ ವಿಚಾರವಾಗಿ ಅಮಿಕಸ್ ಕ್ಯೂರಿಯಾಗಿ ಕಾರ್ಯನಿರ್ವಹಿಸಿದ ಹಿರಿಯ ವಕೀಲ ಸಿದ್ದಾರ್ಥ್ ಲೂಡ್ರಾ ಅವರ ಸಲಹೆಯನ್ನು ನ್ಯಾಯಪೀಠ ಪರಿಗಣಿಸಿದೆ ಎನ್ನಲಾಗಿದೆ. ಸಾಮಾನ್ಯ ಸೇವಾ ವಿಧಾನವನ್ನು ಅನುಸರಿಸುವ ಬದಲು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ನೋಟಿಸ್‌ಗಳನ್ನು ನೀಡುವ ಮೂಲಕ ಪೊಲೀಸರು ಕಾನೂನಿನ ಆದೇಶವನ್ನು ತಪ್ಪಿಸಬಾರದು ಎಂದು ಅವರು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 532ರ ಅಡಿಯಲ್ಲಿ ಪ್ರಕರಣವೊಂದರ ವಿಚಾರಣೆ ಮತ್ತು ಪ್ರಕ್ರಿಯೆಗಳನ್ನು ಎಲೆಕ್ಟ್ರಾನಿಕ್ ಸಂವಹನ ಅಥವಾ ಆಡಿಯೊ-ವಿಡಿಯೊ ಮೂಲಕವು ನಡೆಸಬಹುದು. ಆದರೆ, ಬಿಎನ್‌ಎಸ್‌ಎಸ್ ಸೆಕ್ಷನ್ 35ರ ಅಡಿಯಲ್ಲಿ ನೋಟಿಸ್ ಅನ್ನು ವಾಟ್ಸ್ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ನೀಡಲು ಅನುಮತಿಯಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟನೆ ನೀಡಿದೆ.

You may also like

News

ಅಪಘಾತದಲ್ಲಿ ಗಾಯಗೊಂಡ ರಮಾನಾಥ ರೈ ಆರೋಗ್ಯ ವಿಚಾರಿಸಿದ ಸಂಸದ ಬ್ರಿಜೇಶ್ ಚೌಟ

ಕಾರು ಹಾಗೂ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಬಿ. ರಮಾನಾಥ ರೈ ಮತ್ತು ಅವರ
News

Father Muller Welcomes 33rd Batches of Allied Health and Physiotherapy Students

A new generation of aspiring healthcare professionals began their academic journey at Father Muller as the 33rd batches of Father

You cannot copy content of this page