September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಕುಲಶೇಖರದ ಪ್ರತಿಭಾನ್ವಿತ ಯುವ ಗಾಯಕಿ ರೀಷಲ್ ಮೆಲ್ಬಾ ಕ್ರಾಸ್ತಾ ಇವರಿಗೆ ‘ಸೂಪರ್ ಸಿಂಗರ್ 5’ ರಲ್ಲಿ ಪ್ರಥಮ ಸ್ಥಾನ

ರೂಪಾಯಿ ಒಂದು ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ

ಬೆಂಗಳೂರಿನ ಗೋಪಾಲನ್ ಮಾಲ್ ಇವರು ಜನವರಿ 26ರಂದು ಬೆಂಗಳೂರಿನಲ್ಲಿ ಆಯೋಜಿಸಿದ ‘ಸೂಪರ್ ಸಿಂಗರ್ 5’ ಇದರಲ್ಲಿ ಮಂಗಳೂರಿನ ಕುಲಶೇಖರದ ಪ್ರತಿಭಾನ್ವಿತ ಯುವ ಗಾಯಕಿ ರೀಷಲ್ ಮೆಲ್ಬಾ ಕ್ರಾಸ್ತಾ ಇವರು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಇವರು ರೂಪಾಯಿ ಒಂದು ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಅಶ್ವಿನಿ ಪುನೀತ್ ರಾಜ್ ಕುಮಾರ್, ಝೀ ಕನ್ನಡ ಹಾಗೂ ಸಂಗೀತ ದಿಗ್ಗಜರ  ಸಮ್ಮುಖದಲ್ಲಿ ಈ ಸನ್ಮಾನ ನೀಡಲಾಗಿದೆ. ಮಂಗಳೂರಿನ ಪ್ರಖ್ಯಾತ ಗಾಯಕ ರೋನಿ ಕ್ರಾಸ್ತಾ ಹಾಗೂ ಮೆಟಿಲ್ಡಾ ಕ್ರಾಸ್ತಾ ದಂಪತಿಗಳ ಮಗಳಾದ ಇವರು ಪ್ರಸ್ತುತ ಸೈಂಟ್ ಎಲೋಶಿಯಸ್ ಕಾಲೇಜ್ ಮಂಗಳೂರು ಇಲ್ಲಿ ಪ್ರಥಮ ಪಿಯುಸಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರತಿನಿಧಿಸಿದ ಇವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಮುಂದಿನ ಎಲ್ಲಾ ಸಂಗೀತ ಕಾರ್ಯಕ್ರಮಗಳಲ್ಲಿ ವಿಜೇತೆಯಾಗಿ ಹೊರಹೊಮ್ಮಲಿ ಎಂದು ಸಂಗೀತ ಪ್ರೇಮಿಗಳು ಶುಭ ಹಾರೈಸಿದ್ದಾರೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page