May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಲಶೇಖರದ ಕೊರ್ಡೆಲ್ ಪವಿತ್ರ ಶಿಲುಬೆ ಚರ್ಚ್‌ನಲ್ಲಿ ಫೆಬ್ರವರಿ 8 ಮತ್ತು 9ರಂದು ‘ಕೊರ್ಡೆಲ್‌ ಖೇಳ್-ಮೇಳ್’ ಕಾರ್ಯಕ್ರಮ

ಮಂಗಳೂರಿನ ಕುಲಶೇಖರದ ಕೊರ್ಡೆಲ್ ಪವಿತ್ರ ಶಿಲುಬೆ ಚರ್ಚ್‌ನಲ್ಲಿ ಫೆಬ್ರವರಿ 8 ಮತ್ತು 9ರಂದು ‘ಕೊರ್ಡೆಲ್‌ ಖೇಳ್-ಮೇಳ್’ ಆಯೋಜಿಸಲಾಗಿದೆ ಎಂದು ಚರ್ಚ್‌ನ ಪ್ರಧಾನ ಧರ್ಮಗುರು ವಂದನೀಯ ಫಾದರ್ ಕ್ಲಿಫರ್ಡ್ ಫೆರ್ನಾಂಡಿಸ್ ಇಂದು ಫೆಬ್ರವರಿ 3ರಂದು ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿವಿಧ ರೀತಿಯ ಆಹಾರ ಮಳಿಗೆಗಳು ಹಾಗೂ ಮನೋರಂಜನಾ ಆಟಗಳ ಸ್ಟಾಲ್‌ಗಳು ಒಳಗೊಂಡಿವೆ ಎಂದರು.

ಫೆಬ್ರವರಿ 8ರಂದು ಶನಿವಾರ ಸಂಜೆ 8 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಭಾಸ್ಕರ್ ಮೊಯ್ಲಿ, ಕಿಶೋರ್ ಕೊಟ್ಟಾರಿ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾರ್ಯಕ್ರಮದ ಸಂಯೋಜಕ ರೋಯ್ ಕ್ಯಾಸ್ತೆಲಿನೋ, ಚರ್ಚ್‌ ಪಾಲನಾ ಸಮಿತಿ ಉಪಾಧ್ಯಕ್ಷೆ ರೂತ್ ಕ್ಯಾಸ್ತೆಲಿನೋ, ಕಾರ್ಯದರ್ಶಿ ಅನಿಲ್ ಡೇಸಾ, ಮಾಧ್ಯಮ ಸಂಯೋಜಕ ಎಲಿಯಾಸ್ ಫೆರ್ನಾಂಡಿಸ್ ಪತ್ರಿಕಾ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page