May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಮಿಲಾಗ್ರಿಸ್ ಕಾಲೇಜ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನ

ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಅಂಗವಾಗಿ ಫೆಬ್ರವರಿ 4ರಂದು ಮಂಗಳವಾರ ಮಿಲಾಗ್ರಿಸ್ ಕಾಲೇಜು ಆಫ್  ನರ್ಸಿಂಗ್ ಇದರ  ಪ್ರಥಮ ವರ್ಷದ‌‌ 35 ವಿದ್ಯಾರ್ಥಿಗಳು ಬೀದಿ ನಾಟಕವನ್ನು ಪ್ರದರ್ಶಿಸಿದರು. ಪ್ರತಿ ವರ್ಷ ಫೆಬ್ರವರಿ 4ರಂದು ವಿಶ್ವ ಕ್ಯಾನ್ಸರ್‌ ದಿನವನ್ನು  ಮನುಷ್ಯನನ್ನು ಶತ್ರುವಾಗಿ ಕಾಡುವ ಕ್ಯಾನ್ಸರ್‌ ರೋಗದ ಬಗ್ಗೆ ಜನರಲ್ಲಿ ಸರಿಯಾಗಿ ಜಾಗೃತಿ ಮೂಡಿಸಲು  ಆಚರಿಸಲಾಗುತ್ತದೆ.

ವಿದ್ಯಾರ್ಥಿಗಳು ಕ್ಯಾನ್ಸರ್ ಎಂಬ ಮಾರಕ ರೋಗಕ್ಕೆ ಕಾರಣಗಳು, ಅದರ‌ ಎಚ್ಚರಿಕೆಯ ಚಿಹ್ನೆಗಳು ಹಾಗೂ ಅದನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.  ಪ್ಲಾಸ್ಟಿಕ್ ಬಳಕೆ, ಧೂಮಪಾನ,  ಮದ್ಯಪಾನ , ತಂಬಾಕು ಸೇವನೆಯಿಂದ ಹೆಚ್ಚುತ್ತಿರುವ ಕ್ಯಾನ್ಸರ್ ರೋಗವನ್ನು ನಿಯಂತ್ರಿಸುವ ಕುರಿತು ಮಾಹಿತಿ ನೀಡಿದರು.

ಇದೇ ನಾಟಕವನ್ನು ಫೆಬ್ರವರಿ 8ರಂದು ಶನಿವಾರ ಸಂಜೆ 4 ಗಂಟೆಗೆ ಫಾರಂ ಮಾಲ್ ನಲ್ಲಿ
ಪ್ರದರ್ಶಿಸಲಾಗುತ್ತದೆ. ಕಾಲೇಜಿನ ನಿರ್ದೇಶಕ ವಂದನೀಯ ಫಾದರ್  ಬೊನವೆಂಚರ್ ನಜ್ರೆತ್ ಕಾಲೇಜಿನ ಪ್ರಾಂಶುಪಾಲೆ ಡಾ. ಡಯಾನ ಲೋಬೋ ಹಾಗೂ ಇತರ ಅಧ್ಯಾಪಕ  ವೃಂದದವರು ಉಪಸ್ಥಿತರಿದ್ದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page