October 24, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಫೆಬ್ರವರಿ 8ರಂದು “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ

ಮಂಗಳೂರು: “ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8ರಂದು ಶನಿವಾರ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಆರಂಭ ಗೊಳ್ಳಲಿದ್ದು ರಾತ್ರಿ 8:30ರವರೆಗೆ ಕಾರ್ಯಕ್ರಮ ನಡೆಯಲಿದೆ”ಎಂದು ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಬೆಳಿಗ್ಗೆ 8.40ರಿಂದ 9.30 ರವರೆಗೆ ವಿಭಾ ಎಸ್. ನಾಯಕ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ. ತಬಲಾದಲ್ಲಿ ವಿಕ್ಷೇಶ್ ಪ್ರಭು ಹಾಗೂ ಹಾರ್ಮೋನಿಯಂನಲ್ಲಿ ಹೇಮಂತ್ ಭಾಗವತ್ ಸಾಥ್ ನೀಡಲಿದ್ದಾರೆ. ಬೆಳಿಗ್ಗೆ 9.40 ರಿಂದ 10.30 ರವರೆಗೆ ಮೂಡುಬಿದಿರೆಯ ಸ್ವಯಂ ಪ್ರಕಾಶ್‌ ಪ್ರಭು (ಪಂಡಿತ್ ಹರಿಪ್ರಸಾದ್ ಚೌರಾಸಿಯಾ ಅವರ ಶಿಷ್ಯ) ಅವರಿಂದ ಕೊಳಲು ವಾದನ, ಬೆಳಿಗ್ಗೆ 10.40 ರಿಂದ 11.30ರವರೆಗೆ ಆತ್ರೇಯಾ ಗಂಗಾಧರ್ ಅವರಿಂದ ಗಾಯನ, 11.40ರಿಂದ ಕಲಾಸಾಧನ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದರು.

ಬಳಿಕ ಮಾತಾಡಿದ ಕಲಾಸಾಧನ ಸಂಸ್ಥೆಯ ನಿರ್ದೇಶಕಿ ವಿಭಾ ಶ್ರೀನಿವಾಸ್ ನಾಯಕ್ ಅವರು, “ಸಂಜೆ 5 ಗಂಟೆಗೆ ಹಿಂದೂಸ್ತಾನಿ ಸಂಗೀತ ಕಛೇರಿ ಉದ್ಘಾಟನೆಗೊಳ್ಳಲಿದೆ. ಸಂಜೆ 5.45ರಿಂದ 7ರವರೆಗೆ ಬಸವರಾಜ ವಂದಲಿ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಛೇರಿ, 7.15 ರಿಂದ 8.30ವರೆಗೆ ಕೋಲ್ಕತ್ತಾದ ಅರಣ್ಯ ಚೌಧರಿ ಅವರಿಂದ ಸಂತೂರ್ ವಾದನ ಕಛೇರಿ ನಡೆಯಲಿದೆ ಅವರು ಮುಂಬೈ, ಬನಾರಸ್, ದೆಹಲಿ ಹಾಗೂ ಜರ್ಮನಿ, ಫ್ರಾನ್ಸ್, ಪೋಲೆಂಡ್ ಮುಂತಾದ ಕಡೆಗಳಲ್ಲಿ ಪ್ರದರ್ಶನ ನೀಡಿರುವ ಖ್ಯಾತ ಸಂತೂರ್‌ ವಾದಕರಾಗಿದ್ದಾರೆ” ಎಂದರು.

ಮಂಗಳೂರಿನ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂಗೀತ ಕಾರ್ಯಕ್ರಮದಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಸ್ವಸ್ತಿಕ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಪ್ರಾಂಶುಪಾಲೆ ಮಾಲಿನಿ ಹೆಬ್ಬಾರ್ ಉಪಸ್ಥಿತರಿದ್ದರು.

You may also like

News

ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್ ಬಸ್‌ಗೆ ಪ್ರವಾಸಿ ಮಿನಿ ಬಸ್ ಡಿಕ್ಕಿ – ಚಾಲಕ ಸೇರಿ 13 ವಿದ್ಯಾರ್ಥಿಗಳಿಗೆ ಗಾಯ

ಗಾಯಾಳುಗಳಿಗೆ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಲ್ಕಿಯ ಕೊಲ್ನಾಡು ಬಳಿ ಪ್ರವಾಸಿ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಶಾಲಾ ಬಸ್ ಚರಂಡಿಗೆ
News

1 ವರ್ಷ 1 ತಿಂಗಳ ಪುಟಾಣಿ ಚಾರ್ವಿಕ್‌ ವಿಶ್ವದಾಖಲೆ – 2 ನಿಮಿಷ 40 ಸೆಕೆಂಡುಗಳಲ್ಲಿ 40 ಮೆಟ್ಟಿಲು ಹತ್ತಿ ಅಂತಾರಾಷ್ಟ್ರೀಯ ಮನ್ನಣೆ!

ಮಂಗಳೂರಿನ ದೀಪಕ್ ಶೆಟ್ಟಿ ಹಾಗೂ ವಿನುತಾ ಶೆಟ್ಟಿ ದಂಪತಿಯ ಪುತ್ರನಿಗೆ ‘ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ ಗೌರವ – ‘ಸೂಪರ್ ಟ್ಯಾಲೆಂಟೆಡ್ ಕಿಡ್’ ಪ್ರಶಸ್ತಿಗೆ ಪಾತ್ರ ಅಂಬೆಗಾಲಿಡುವ

You cannot copy content of this page