October 23, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾಗಿ ಜಯಾನಂದ ಪೆರಾಜೆ

ಕನ್ನಡ ಭವನ ಪದಗ್ರಹಣ ಸಮಾರಂಭ – ಕನ್ನಡ ಬಾವುಟ ಹಸ್ತಾಂತರ

ಬಂಟ್ವಾಳ: ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಹಿರಿಯ ಪತ್ರಕರ್ತ ಸಾಹಿತಿ ಜಯಾನಂದ ಪೆರಾಜೆ ಆಯ್ಕೆಯಾಗಿದ್ದು, ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ಸ್ಥಾಪಕ ಸಂಚಾಲಕ ಡಾ. ವಾಮನ ರಾವ್ ಬೇಕಲ್ ಅಧ್ಯಕ್ಷತೆಯಲ್ಲಿ ಪದಗ್ರಹಣ ಸಮಾರಂಭ ಭಾನುವಾರ ನೆರವೇರಿತು. ರಾಜ್ಯ ಮಹಿಳಾ ಸಂಚಾಲಕಿಯಾಗಿ ಡಾ. ಶಾಂತ ಪುತ್ತೂರು, ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ಕವಿ ವಿರಾಜ್ ಅಡೂರು, ಗೌರವ ಅಧ್ಯಕ್ಷರಾಗಿ ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ, ಕೋಶಾಧಿಕಾರಿಯಾಗಿ ಸಂಧ್ಯಾರಾಣಿ ಬೇಕಲ್ ಅಧಿಕಾರ ಸ್ವೀಕರಿಸಿದರು. ವಿವಿಧ ಪದಾಧಿಕಾರಿಗಳನ್ನು ಘೋಷಿಸಲಾಯಿತು.

ಕೇಂದ್ರದ ಪ್ರಧಾನ ಸಮಿತಿ ಕಚೇರಿ ಮುಳ್ಳಿಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ  ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ಅವರು ಕನ್ನಡ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿ ಕನ್ನಡ ಭಾಷೆ ಸಂಸ್ಕೃತಿ ಉಳಿಸಲು ವಿವಿಧ ಕನ್ನಡ ಸಂಘಟನೆಗಳು ಕೈಜೋಡಿಸಬೇಕೆಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೊ. ಪಿ.ಎನ್. ಮೂಡಿತ್ತಾಯ, ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡರಾದ ಡಾ. ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಕವಯಿತ್ರಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೊ. ಎ. ಶ್ರೀನಾಥ್, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಶುಭ ಹಾರೈಸಿದರು.

ಡಾ. ವಾಮನ ರಾವ್ ಬೇಕಲ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಪರಿಷತ್ತಿನ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು. ಚುಟುಕು ಸಾಹಿತಿ ವಿರಾಜ್ ಅಡೂರು ಅಧ್ಯಕ್ಷತೆಯಲ್ಲಿ ಅಂತಾರಾಜ್ಯ ಮಟ್ಟದ ಚುಟುಕು ಕವಿ ಗೋಷ್ಠಿ ನಡೆಯಿತು. ಕ.ಸಾ.ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು.  ನರಸಿಂಹ ಭಟ್ ಏತಡ್ಕ ವಂದಿಸಿದರು.

You may also like

News

ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್ ಬಸ್‌ಗೆ ಪ್ರವಾಸಿ ಮಿನಿ ಬಸ್ ಡಿಕ್ಕಿ – ಚಾಲಕ ಸೇರಿ 13 ವಿದ್ಯಾರ್ಥಿಗಳಿಗೆ ಗಾಯ

ಗಾಯಾಳುಗಳಿಗೆ ಮುಕ್ಕದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಲ್ಕಿಯ ಕೊಲ್ನಾಡು ಬಳಿ ಪ್ರವಾಸಿ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ರಯಾನ್ ಇಂಟರ್‌ನ್ಯಾಷನಲ್ ಸ್ಕೂಲ್‌ನ ಶಾಲಾ ಬಸ್ ಚರಂಡಿಗೆ
News

1 ವರ್ಷ 1 ತಿಂಗಳ ಪುಟಾಣಿ ಚಾರ್ವಿಕ್‌ ವಿಶ್ವದಾಖಲೆ – 2 ನಿಮಿಷ 40 ಸೆಕೆಂಡುಗಳಲ್ಲಿ 40 ಮೆಟ್ಟಿಲು ಹತ್ತಿ ಅಂತಾರಾಷ್ಟ್ರೀಯ ಮನ್ನಣೆ!

ಮಂಗಳೂರಿನ ದೀಪಕ್ ಶೆಟ್ಟಿ ಹಾಗೂ ವಿನುತಾ ಶೆಟ್ಟಿ ದಂಪತಿಯ ಪುತ್ರನಿಗೆ ‘ಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ ಗೌರವ – ‘ಸೂಪರ್ ಟ್ಯಾಲೆಂಟೆಡ್ ಕಿಡ್’ ಪ್ರಶಸ್ತಿಗೆ ಪಾತ್ರ ಅಂಬೆಗಾಲಿಡುವ

You cannot copy content of this page