September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿ ಇದೇ ಮೊದಲ ಬಾರಿಗೆ ಮಕ್ಕಳ ಸೃಜನಶೀಲತೆ ಪ್ರತಿಭೆ ಹಾಗೂ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಫೆಬ್ರವರಿ 10ರಂದು ಕಲಾ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಚಾಲಕರಾದ ವಂದನೀಯ ಫಾದರ್ ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ  ವಂದನೀಯ ಫಾದರ್ ವಿಜಯ್ ಲೋಬೊ ಇವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಚಾಲಕರು ಕಲೆಯು ಮಕ್ಕಳಲ್ಲಿ ಅಭಿರುಚಿಯನ್ನು ಬೆಳೆಸುತ್ತದೆ. ಅದನ್ನು ಪೋಷಿಸುವ ಕಾರ್ಯ ನಮ್ಮ ಶಿಕ್ಷಣ ಸಂಸ್ಥೆಯಿಂದ ಆಗುತ್ತಿದೆ. ಮಕ್ಕಳ ಕಲಾ ಪ್ರತಿಭೆಗೆ ವೇದಿಕೆಯನ್ನು ಸಲ್ಲಿಸಿದ ಎಲ್ಲರಿಗೂ ಅಭಿನಂದನೆಯನ್ನು ಸಲ್ಲಿಸಿದರು. ನಂತರ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ರಚಿಸಿದ ಚಿತ್ರಕಲೆ ಹಾಗೂ ಕರಕುಶಲ ಪ್ರದರ್ಶನವನ್ನು ಅನುಗ್ರಹ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಈ ಚಿತ್ರಕಲೆ ಹಾಗೂ ಕರಕುಶಲತೆಯನ್ನು ವೀಕ್ಷಿಸಿದರು. ಕಲಾ ಶಿಕ್ಷಕಿಯರಾದ ಸುಮನ ಹಾಗೂ ಗ್ಲೋರಿಯಾ ಇವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ವಿದ್ಯಾರ್ಥಿ ಸಾಯಿಶ್‌ ರಾಜ್ ಕಾರ್ಯಕ್ರಮದ ಮಹತ್ವವನ್ನು ತಿಳಿಸಿ, ವಿದ್ಯಾರ್ಥಿನಿ ಸರಸ್ವತಿ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page