September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೋಳಿಯಾರಿನಲ್ಲಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಚಿಕಿತ್ಸೆ ಫಲಕಾರಿಯಾಗದೆ ರೋಷನ್ ಮೋರಸ್ ಮೃತ್ಯು

ಉಳ್ಳಾಲದ ಬೋಳಿಯಾರ್ ನಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಡಿಕ್ಕಿ ಹೊಡೆದ ಘಟನೆ ಫೆಬ್ರವರಿ 12ರಂದು ರಾತ್ರಿ ಬೋಳಿಯಾರಿನಲ್ಲಿ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮಂಜೇಶ್ವರ ತಾಲೂಕು ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ 34ವರ್ಷ ಪ್ರಾಯದ ರೋಷನ್ ಮೋರಸ್ ಮೃತ ಯುವಕ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್. ಈತ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಬೋಳಿಯಾರಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳೀಯರು ತಕ್ಷಣ ಮಂಗಳೂರಿನ ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಮತ್ತೆ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಫೆಬ್ರವರಿ 13ರಂದು ಗುರುವಾರ ಸಂಜೆ ಸಾವನ್ನಪ್ಪಿದ್ದಾರೆ.

ಮೃತರಿಗೆ ಮದುವೆ ಆಗಿ ನಾಲ್ಕು ವರ್ಷಗಳಾಗಿದ್ದು ಐದು ತಿಂಗಳ ಹೆಣ್ಣು ಮಗುವಿದೆ. ಇವರು ಪತ್ನಿ ಹಾಗೂ ಹೆಣ್ಣು ಮಗುವನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page