September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯಲ್ಲಿ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನಾಭರಣ ಕಳ್ಳತನ

ಬೆಳ್ತಂಗಡಿ : ಮನೆಯೊಂದರಿಂದ ಚಿನ್ನಾಭರಣಗಳನ್ನು ಕಳ್ಳರು ದೋಚಿದ ಘಟನೆ ವರದಿಯಾಗಿದೆ. ಯುವತಿಯೊಬ್ಬಳು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು 3,12,000 ರೂಪಾಯಿ ಮೌಲ್ಯದ 52ಗ್ರಾಂ ತೂಕದ ಚಿನ್ನಾಭರಣಗಳನ್ನು ನೆರಿಯಾ ಗ್ರಾಮ ಅಕ್ಕೋಳೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ ಅಕ್ಕೋಳೆ ನಿವಾಸಿ ಫಾತಿಮತ್ ರಂಝೀನ್ (19) ರವರ ದೂರಿನಂತೆ ಫೆಬ್ರವರಿ 19ರಂದು ಬೆಳಿಗ್ಗೆ 9.00 ಗಂಟೆಗೆ ತನ್ನ ಮನೆಯ ಬಾಗಿಲು ತೆರೆದಿಟ್ಟು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಕೆಲಸ ಮುಗಿಸಿ 9.30 ಗಂಟೆಗೆ ತನ್ನ ಮನೆಯಲ್ಲಿರುವ ಗೋದ್ರೆಜ್‌ನ ಕೋಣೆಗೆ ಹೋದಾಗ ಬಾಗಿಲು ತೆರೆದು ಬಟ್ಟೆಗಳೆಲ್ಲಾ ಚಲ್ಲಾಪಿಲ್ಲಿಯಾದ್ದು ಗೋದ್ರೆಜ್‌ನಲ್ಲಿ ಇಟ್ಟಿದ್ದ ಸುಮಾರು 52 ಗ್ರಾಂ ಚಿನ್ನಾಭರಣಗಳು ಕೂಡಾ ಕಾಣೆಯಾಗಿರುತ್ತದೆ.

ಯುವತಿ ಅಡುಗೆ ಕೋಣೆಯಲ್ಲಿ ಇದ್ದ ಸಮಯ ಯಾರೋ ಕಳ್ಳರು ಮನೆಯೊಳಗೆ ಬಂದು ಸುಮಾರು 3,12,000/- ರೂಪಾಯಿ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆ ಎಂಬುದಾಗಿ ಯುವತಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 06/2025 ಕಲಂ: 305 ಬಿ್.ಎನ್.ಎಸ್. ರಂತೆ ಪ್ರಕರಣ ದಾಖಲಾಗಿದೆ.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page