September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆಯವರಿಗೆ ಯುನಿವರ್ಸಲ್‌ ಮೀಡಿಯಾ ಅವಾರ್ಡ್

ಮಂಗಳೂರು : ಇಂಟರ್ ನ್ಯಾಷನಲ್ ಕಲ್ಚರಲ್ ಫೆಸ್ಟ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಯುನಿವರ್ಸಲ್ ಮೀಡಿಯಾ ಅವಾರ್ಡ್ 2025 ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅವರು ಭಾಜನರಾಗಿದ್ದಾರೆ.

ಮಾಧ್ಯಮ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ದುಬೈನಲ್ಲಿ ಫೆಬ್ರವರಿ 24ರಂದು ನಡೆಯುವ 47ನೇ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಹಾಗೂ ಸಾಂಸ್ಕೃತಿಕ ವಿನಿಮಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ದುಬೈ ಆಲ್ ಹಜ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಮೊಹಮ್ಮದ್ ಇಬ್ರಾಹಿಂ ಅಲ್ ಹಜ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶ್ರೀನಿವಾಸ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಬಳಿಕ ಪತ್ರಕರ್ತರ ಗ್ರಾಮ ವಾಸ್ತವ್ಯ, ಬ್ರ್ಯಾಂಡ್ ಮಂಗಳೂರು ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕುತ್ಲುರು ಸರಕಾರಿ ಶಾಲೆ, ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.

You may also like

News

ಸೆಪ್ಟೆಂಬರ್ 8ರ ಮೊಂತಿ ಫೆಸ್ಟ್‌ಗೆ ಕರಾವಳಿ-ಮಲೆನಾಡಿನ ನಾಲ್ಕು ಜಿಲ್ಲೆಗಳಲ್ಲಿ ಸಾರ್ವಜನಿಕ ರಜೆ ಘೋಷಿಸಲು ಕ್ರಿಶ್ಚಿಯನ್ಸ್ ಯೂನಿಯನ್ ಪುತ್ತೂರು ಆಗ್ರಹ

MLC ಐವನ್ ಡಿಸೋಜ ಅವರಿಗೆ ವಿಧಾನ ಪರಿಷತ್ ಮುಖ್ಯ ಸಚೇತಕ ಹುದ್ದೆ ನೀಡುವಂತೆಯೂ ಮೌರಿಸ್ ಮಸ್ಕರೇನ್ಹಸ್ ಒತ್ತಾಯ ಪುತ್ತೂರು: ಕರಾವಳಿ ಹಾಗೂ ಮಲೆನಾಡು ಭಾಗದ ಕ್ರೈಸ್ತ ಸಮುದಾಯದ
News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ

You cannot copy content of this page