July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆರಿಗೆ ಬಳಿಕ ಬಾಣಂತಿ ಹೊಟ್ಟೆಯೊಳಗೆ ಬಾಕಿಯಾದ ಬಟ್ಟೆ – ವೈದ್ಯರ ನಿರ್ಲಕ್ಷ್ಯಕ್ಕೆ ಪತಿ ಆಕ್ರೋಶ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಸಿಝೇರಿಯನ್ ಹೆರಿಗೆಯಾದ ಬಳಿಕ ಬಾಣಂತಿಯ ಹೊಟ್ಟೆಯೊಳಗೆ ಬಟ್ಟೆಯ ತುಂಡು ಬಾಕಿಯಾಗಿದ್ದು, ಇದೀಗ ವೈದ್ಯರ ನಿರ್ಲಕ್ಷ್ಯದ ಬಗ್ಗೆ ಬಾಣಂತಿಯ ಪತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಬಾಣಂತಿ ಮಹಿಳೆ ಶರಣ್ಯಾ ಲಕ್ಷ್ಮೀ ಅವರ ಪತಿ ಗಗನ್ ದೀಪ್ ಬಿ. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೂಕ್ತ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿದ್ದಾರೆ.

ಹೆರಿಗೆ ಸಂದರ್ಭ ಪುತ್ತೂರಿನ ಸಿಟಿ ಆಸ್ಪತ್ರೆಯ ವೈದ್ಯ ಡಾ. ಅನಿಲ್‌ರವರ ನಿರ್ಲಕ್ಷ್ಯದಿಂದ ಹೊಟ್ಟೆಯಲ್ಲಿ ಬಟ್ಟೆ ಬಾಕಿಯಾಗಿದ್ದು, ಈ ವಿಚಾರ ಅವರ ಗಮನಕ್ಕೆ ಬಂದ ಬಳಿಕವೂ ನಿರ್ಲಕ್ಷ್ಯ ಮುಂದುವರಿಸಿದ್ದಾರೆ. ಇದರಿಂದಾಗಿ ಪತ್ನಿಗೆ ಹಲವು ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಿದೆ ಎಂದು ಪತಿ ಗಗನ್ ದೀಪ್ ಆರೋಪಿಸಿದ್ದಾರೆ.

2024ರ ನವಂಬರ್ 27ರಂದು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ 33 ವರ್ಷ ಪ್ರಾಯದ ಶರಣ್ಯಾ ಲಕ್ಷ್ಮೀ ಬಿ. ಎಂಬವರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾಗಿತ್ತು. ಡಿಸೆಂಬರ್ 2ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದಾದ ಬಳಿಕ ವಿಪರೀತ ಜ್ವರ ಬಂದಿತ್ತು. ಇದನ್ನು ಹೆರಿಗೆ ಮಾಡಿಸಿದ ವೈದ್ಯರ ಗಮನಕ್ಕೆ ತಂದಾಗ ಜ್ವರದ ಔಷಧಿ ನೀಡಿದ್ದರು. ಕೆಲವು ದಿನಗಳ ಬಳಿಕ ಮಗುವನ್ನು ಹಾಸಿಗೆಯಿಂದ ಎತ್ತಲಾಗದ ಮತ್ತು ನಿಲ್ಲಲಾಗದ ಸ್ಥಿತಿ ನಿರ್ಮಾಣವಾಗಿದ್ದು ಬೇರೆ ವೈದ್ಯರಲ್ಲಿ ಪರೀಕ್ಷೆ ನಡೆಸಿದ ಬಳಿಕ ಬಟ್ಟೆ ಬಾಕಿ ಆಗಿರುವುದು ತಿಳಿದು ಬಂದಿದೆ. ಬಳಿಕ ಜನವರಿ 25ರಂದು ಪುತ್ತೂರಿನ ಆಸ್ಪತ್ರೆಯಲ್ಲಿ ಡಾ. ವಿವೇಕ್ ಕಜೆ ನೇತೃತ್ವದಲ್ಲಿ ಸುಮಾರು 4 ತಾಸಿನ ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಲ್ಲಿ ಬಾಕಿಯಾಗಿದ್ದ ಬಟ್ಟೆಯನ್ನು ತೆರವು ಮಾಡಲಾಗಿದೆ. ಇದರಿಂದಾಗಿ ಆರೋಗ್ಯ ಸಮಸ್ಯೆ ಉಂಟಾಗಿದ್ದಲ್ಲದೇ, ಹಣವೂ ಖರ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದ ಬಗ್ಗೆ ಪಿ.ಜಿ. ಪೋರ್ಟಲ್‌ನಲ್ಲಿ ಮೊದಲು ದೂರು ದಾಖಲಿಸಲಾಗಿದೆ. ಫೆಬ್ರವರಿ 22ರಂದು ಜಿಲ್ಲಾ ಆರೋಗ್ಯಧಿಕಾರಿಗಳಿಗೆ ವೈದ್ಯರ ನಿರ್ಲಕ್ಷ್ಯದ ಬಗ್ಗೆ ದೂರು ನೀಡಲಾಗಿದೆ. ಫೆಬ್ರವರಿ 23ರಂದು ಪುತ್ತೂರು ಸಿಟಿ ಆಸ್ಪತ್ರೆಯ ಡಾ. ಅನಿಲ್ ಮೇಲೆ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಡಿಯನ್ ಮೆಡಿಕಲ್ ಬೋರ್ಡ್ ಹಾಗೂ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲೂ ದೂರು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗಗನ್ ದೀಪ್, ಸಂಬಂಧಿಕರಾದ ಶಿವಪ್ರಸಾದ್ ಸರಳಿ ಮತ್ತು ಶಿವಕುಮಾರ್ ಉಪಸ್ಥಿತರಿದ್ದರು.

You may also like

News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು
News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at

You cannot copy content of this page