August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ

ಇಚ್ಛಾಶಕ್ತಿ ಇದ್ದರೆ ಸರ್ಕಾರಿ ಸವಲತ್ತುಗಳನ್ನು ಜನರಿಗೆ ತಲುಪಿಸಲು ಸಾಧ್ಯವಿದೆ – ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ

ಇಚ್ಛಾಶಕ್ತಿ ಇದ್ದರೆ ಸರ್ಕಾರಿ ಸವಲತ್ತುಗಳನ್ನು ಜನರಿಗೆ ತಲುಪಿಸಲು ಸಾಧ್ಯವಿದೆ. ಕಳೆದ ನಾಲ್ಕು ವರ್ಷಗಳಿಂದ ಮಾಣಿ ಗ್ರಾಮ ಪಂಚಾಯತ್ ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದೆ. ಇದು ಅಭಿನಂದನಾರ್ಹ ಎಂದು ಮಾಣಿ ಗ್ರಾಮ ಪಂಚಾಯತ್ ಸದಸ್ಯ, ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು. ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿಯವರು, ಜನರು ಪಂಚಾಯತ್ತಿಗೆ ಕಟ್ಟಬೇಕಾದ ತೆರಿಗೆ ಮತ್ತು ಶುಲ್ಕಗಳನ್ನು ಸಮಯಕ್ಕೆ ಸರಿಯಾಗಿ ಕಟ್ಟಬೇಕು. ಆಗ ನಾವು ಜನರಿಗೆ ಸವಲತ್ತುಗಳನ್ನು ನೀಡಲು ಸಾಧ್ಯವಾಗುತ್ತದೆ. ಪಂಚಾಯತ್ ವತಿಯಿಂದ ನಾವು ಸಂಘಟಿಸುವ ಕಾರ್ಯಕ್ರಮಗಳಿಗೆ ಜನರು ನಮ್ಮ ಜೊತೆ ಕೈಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ, ವಿಕಲಚೇತನರಿಗೆ ಸಹಾಯಧನ ಮತ್ತು ವೈದ್ಯಕೀಯ ವೆಚ್ಚದ ಚೆಕ್ ಹಾಗೂ ನೀರಿನ ಟ್ಯಾಂಕ್ ವಿತರಿಸಲಾಯಿತು. ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಇಬ್ರಾಹಿಂ ಕೆ. ಮಾಣಿ, ನಾರಾಯಣ ಶೆಟ್ಟಿ ತೋಟ, ರಮಣಿ ಡಿ. ಪೂಜಾರಿ, ಪ್ರೀತಿ ಡಿನ್ನಾ ಪಿರೇರಾ, ಸೀತಾ ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

You may also like

News

ಮಡಂತ್ಯಾರಿನ ಶಾನ್ವಿ ಮತ್ತು ಶ್ರೇಯಸ್‌ ಅವರಿಗೆ ‘ರಾಷ್ಟ್ರೀಯ ಪ್ರತಿಭಾ ರತ್ನ’ ಗೌರವ

ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್‌ (ರಿ.), ಕರ್ನಾಟಕ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ‘ಸ್ವಾತಂತ್ರ್ಯೋತ್ಸವ–2026’ ಕಾರ್ಯಕ್ರಮದಲ್ಲಿ ಮಡಂತ್ಯಾರಿನ ಪ್ರತಿಭೆಗಳಾದ ಶಾನ್ವಿ ಪೂಜಾರಿ ಹಾಗೂ ಶ್ರೇಯಸ್ ಪೂಜಾರಿ ಅವರಿಗೆ
News

ಮಡಂತ್ಯಾರಿನಲ್ಲಿ ಸಂಭ್ರಮದ ಕೊಂಕಣಿ ಮಾನ್ಯತಾ ದಿವಸ್

ಕೊಂಕಣಿ ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಐಸಿವೈಎಂ ಮಡಂತ್ಯಾರು ಘಟಕ, ಸಾಮಾಜಿಕ ಸಂವಹನ ಆಯೋಗ, ಕಥೊಲಿಕ್ ಸಭಾ ಮಡಂತ್ಯಾರು ಹಾಗೂ

You cannot copy content of this page