September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆರೋಪಿಗಳ ಜೊತೆಗೆ ಸೆಲ್ಫಿ ತೆಗೆದು ಸಸ್ಪೆಂಡ್ ಆದ ಉರ್ವಾ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಪೀಟರ್ ಡಿಸೋಜ

ಮಂಗಳೂರು ಫೆಬ್ರವರಿ 26: ಸೈಬ‌ರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ತಿರುಗಾಟ ನಡೆಸಿದ್ದಲ್ಲದೆ ಅವನ ಜೊತೆ ಸೆಲ್ಫಿ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉರ್ವಾ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೆಬಲ್ ಪೀಟರ್ ಡಿಸೋಜ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಈ ಘಟನೆ ಸಂಬಂಧ ಉರ್ವ ಠಾಣೆಯ ಇನ್‌ಸ್ಪೆಕ್ಟರ್ (ಭಾರತಿ) ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮಕೈಗೊಂಡಿದ್ದಾರೆ.

ಅಮೆಜಾನ್ ಕಂಪನಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಗಳನ್ನು ಕಸ್ಟಡಿಗೆ ಪಡೆದ ಸಂದರ್ಭದಲ್ಲಿ ಪೊಲೀಸರು ರಾಜಸ್ಥಾನಕ್ಕೆ ತೆರಳಿದಾಗ ಸೆಲ್ಪಿ ತೆಗೆದುಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ತನಿಖೆಯ ಹೊಣೆಯನ್ನು ಉರ್ವಾ ಇನ್ಸ್ ಪೆಕ್ಟರ್ ವಹಿಸಿಕೊಂಡಿದ್ದರು. ಈ ವೇಳೆ, ಬೆಂಗಳೂರು ಏರ್ ಪೋರ್ಟ್ ನಿಂದ ರಾಜಸ್ಥಾನದ ಜೈಪುರಕ್ಕೆ ಇತರೇ ಸಿಬಂದಿಯೊಂದಿಗೆ ವಿಮಾನದಲ್ಲಿ ತೆರಳಿದ್ದರು.

ಈ ವೇಳೆ ಪೊಲೀಸರು ಆರೋಪಿಗಳ ಜೊತೆಗೆ ಸಲುಗೆ ಬೆಳೆಸಿಕೊಂಡು ರಾಜಸ್ಥಾನದ ಪ್ರವಾಸಿ ಸ್ಥಳಗಳಿಗೆ ಸುತ್ತಾಟ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆರೋಪಿ ರಾಜಕುಮಾರ್ ಮೀನಾ ಮೊಬೈಲ್ ಹಿಡಿದು ತಾನೇ ಪೊಲೀಸರೊಂದಿಗೆ ಸೆಲ್ಪಿ ತೆಗೆಸಿಕೊಂಡಿರುವ ಫೋಟೋಗಳಿವೆ. ಮತ್ತೊಂದು ಫೋಟೋದಲ್ಲಿ ಪೊಲೀಸ್ ಸಿಬಂದಿಯೇ ಆರೋಪಿ ಹೆಗಲಿಗೆ ಕೈಹಾಕಿರುವ ರೀತಿಯ ಪೋಸು ಇದೆ. ಇದೀಗ ಸೈಬ‌ರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ಸುತ್ತಾಟಕ್ಕೆ ಹೋಗಿ ಪೊಲೀಸರು ಸೆಲ್ಪಿ ತೆಗೆದುಕೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಘಟನೆ ಸಂಬಂಧಿಸಿ ಉರ್ವಾ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪೀಟ‌ರ್ ಡಿಸೋಜ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಜೊತೆಗೆ, ಒಟ್ಟು ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇನ್ಸ್ ಪೆಕ್ಟ‌ರ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಮುಂದಾಗಿದ್ದಾರೆ. ತನಿಖೆಗೆ ತೆರಳಿದ್ದ ಸಮಯದಲ್ಲಿ ಆರೋಪಿ ರಾಜ್ ಕುಮಾರ್ ಜೊತೆ ಪೀಟರ್ ಡಿಸೋಜ ಸೆಲ್ಪಿ ತೆಗೆಸಿಕೊಂಡಿರುವುದು ಇಲಾಖಾ ಶಿಸ್ತಿನ ಉಲ್ಲಂಘನೆ. ಹಾಗಾಗಿ ಅವರನ್ನು ಅಮಾನತು ಮಾಡಲಾಗಿದೆ. ಠಾಣೆಯ ಇನ್‌ಸ್ಪೆಕ್ಟರ್ ಅವರು ಈ ಘಟನೆಯ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ಹಾಗಾಗಿ ಅವರ ವಿರುದ್ಧವೂ ಶಿಸ್ತು ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ತಿಳಿಸಿದ್ದಾರೆ.

You may also like

News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ
News

ಕಲ್ಲುಗುಂಡಿ ದರೋಡೆ ಪ್ರಕರಣದಲ್ಲಿ ಶ್ರೀನಿವಾಸ ದೋಷಮುಕ್ತ

ಆರೋಪಿ ಪರ ಪ್ರಖ್ಯಾತ ವಕೀಲರಾದ ಪುತ್ತೂರು ಮಹೇಶ್ ಕಜೆ ಯಶಸ್ವಿ ವಾದ ಪುತ್ತೂರು: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ

You cannot copy content of this page