September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ ವಲಯದ ಮಾನೆಲಾ ಧರ್ಮಕೇಂದ್ರದಲ್ಲಿ ವಿಶ್ವ ಮಹಿಳಾ ದಿನ ಆಚರಣೆ

ವಿಟ್ಲ ವಲಯದ ಕ್ರಿಸ್ತರಾಜ ದೇವಾಲಯ ಮನೆಲಾ ಇಲ್ಲಿ ಮಾರ್ಚ್ 2ರಂದು ಆದಿತ್ಯವಾರ ವಿಶ್ವ ಮಹಿಳಾ ದಿನವನ್ನು ಆಚರಿಸಲಾಯಿತು.

 

ಚರ್ಚ್ ಧರ್ಮಗುರು ವಂದನೀಯ ಫಾದರ್ ಸ್ಟ್ಯಾನಿಸ್ಲಸ್ ರೊಡ್ರಿಗಸ್ ಅಧ್ಯಕ್ಷತೆಯನ್ನು ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಪುತ್ತೂರಿನ ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಫ್ಲಾವಿಯ ಆಲ್ಬುಕರ್ಕ್ ಆಗಮಿಸಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ‘ಆಧುನಿಕ ಯುಗದಲ್ಲಿ ಮಹಿಳೆಯರು ಹಿಂದಕ್ಕೆ ಹೋಗದೆ ಪ್ರತಿಯೊಂದರಲ್ಲಿಯೂ ಮುಂದೆ ಬಂದು ತಮ್ಮ ಹಕ್ಕುಗಳಿಗೋಸ್ಕರ ಧ್ವನಿಯೆತ್ತುವಂತೆ’ ಕರೆ ನೀಡಿದರು.

 

ಕಾರ್ಯಕ್ರಮದಲ್ಲಿ ಚರ್ಚ್ ಪಾಲನ ಸಮಿತಿಯ ಉಪಾಧ್ಯಕ್ಷ ರೋಷನ್ ಟೆಲ್ಲಿಸ್, ಕಾರ್ಯದರ್ಶಿ ಫಿಲೋಮಿನಾ ಡಿಸೋಜ ಪಲಸ್ತಡ್ಕ, ಆಯೋಗಗಳ ಸಂಯೋಜಕ ವಿಕ್ಟರ್ ಕುಟಿನ್ಹೊ, ಧರ್ಮ ಭಗಿನಿಯರು, ಮಾನೆಲ ಘಟದ ಸ್ತ್ರೀ ಸಂಘಟನೆಯ ಅಧ್ಯಕ್ಷೆ ಮೇರಿ ಡಿಸೋಜಾ, ಕಾರ್ಯದರ್ಶಿ ಜ್ಯೋತಿ ಡಿಸೋಜಾ ಹಾಗೂ ನೂರಾರು ಮಹಿಳೆಯರು ಪಾಲ್ಗೊಂಡಿದ್ದರು.

ಮಹಿಳೆಯರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು. ಲೀಮಾ ಟೆಲ್ಲಿಸ್ ಸ್ವಾಗತಿಸಿ, ಜ್ಯೋತಿ ಡಿಸೋಜ ವಂದಿಸಿದರು. ಉಪನ್ಯಾಸಕಿ ಶೈಲಾ ಡಿಸೋಜ ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ
News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ

You cannot copy content of this page