September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಂಝಾನ್ ಪ್ರಯುಕ್ತ ಕುಟುಂಬಗಳಿಗೆ ಝಕಾತ್ ದಾನ ನಿಧಿ ಮತ್ತು ಶೈಕ್ಷಣಿಕ ನಿಧಿ ಹಸ್ತಾಂತರ

ಬೆಳ್ತಂಗಡಿ : ದಾನಿಗಳ ಸಹಕಾರದೊಂದಿಗೆ ಮಾರ್ಚ್ 4ರಂದು ಮಂಗಳವಾರ ಮದ್ದಡ್ಕದ ಸಮಾಜ‌ಸೇವಕ ಅಬ್ಬೋನು ಮದ್ದಡ್ಕ ಅವರ ನಿವಾಸದಲ್ಲಿ ಅರ್ಹ ಕುಟುಂಬಗಳಿಗೆ ರಂಝಾನ್ ಆಹಾರದ ಕಿಟ್ ವಿತರಣೆ, ಝಕಾತ್ ದಾನ ನಿಧಿ, ಹಾಗೂ‌ ಅರ್ಹ ಫಲಾನುಭವಿಗಳಿಗೆ ಚಿಕಿತ್ಸೆಗೆ ಧನಸಹಾಯ ಮತ್ತು ಶೈಕ್ಷಣಿಕ ನಿಧಿ ಹಸ್ತಾಂತರ ಕಾರ್ಯಕ್ರಮ ಜರುಗಿತು.

ಇಂಡಿಯನ್ ಆಸ್ಪತ್ರೆ ಮಂಗಳೂರು ಇದರ ಚೇರ್ಮೆನ್, ಖ್ಯಾತ ಹೃದಯರೋಗ ತಜ್ಞ ಡಾ. ಯೂಸುಫ್ ಕುಂಬ್ಲೆ ಅವರ ತಾಯಿಯ ಹೆಸರಿನಲ್ಲಿರುವ ಫಾತಿಮಾ ಹೆಲ್ತ್ ಫೌಂಡೇಶನ್ ವತಿಯಿಂದ ತಲಾ 2 ಸಾವಿರದಂತೆ 50 ಕುಟುಂಬಗಳಿಗೆ 1 ಲಕ್ಷ ರೂಪಾಯಿ ವೆಚ್ಚದಲ್ಲಿ ರಂಝಾನ್ ಆಹಾರ ಸಾಮಾಗ್ರಿಗಳ ಕಿಟ್ ಹಸ್ತಾಂತರಿಸಲಾಯಿತು. ಇದೇ ವೇಳೆ ಜಮೀಯತುಲ್ ಫಲಾಹ್ ಉಡುಪಿ ದಕ್ಷಿಣ ಕನ್ನಡ ಘಟಕದ ಪೂರ್ವ ಜಿಲ್ಲಾಧ್ಯಕ್ಷ, ಹಿರಿಯ ಸಾಮಾಜಿಕ ಮುತ್ಸದ್ದಿ ಹಾಜಿ ಅಬ್ದುಲ್‌ ಲೆತೀಫ್ ಸಾಹೇಬ್ ಅವರ ವತಿಯಿಂದ 30 ಕುಟುಂಬಗಳಿಗೆ ತಲಾ 1500 ರಂತೆ ಝಕಾತ್ ದಾನ ನಿಧಿ ವಿತರಿಸಲಾಯಿತು. ಉಳಿದ ಒಂದು ಲಕ್ಷ ರೂಪಾಯಿಗಳನ್ನು ಜಮೀಯತುಲ್ ಫಲಾಹ್ ಮೂಲಕ ನೀಡುವುದೆಂದು ಅವರು ಈ ವೇಳೆ ಘೋಷಿಸಿದರು.

ಹೊಟೇಲ್ ನಲ್ಲಿ ಕೂಲಿ ಕಾರ್ಮಿಕನಾಗಿದ್ದರೂ ತನ್ನ ಮೂವರು ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ನೀಡುತ್ತಿರುವ ಕುಟುಂಬಕ್ಕೆ ಅಬ್ಬೋನು ಮದ್ದಡ್ಕ ಅವರ ಫ್ಯಾಮಿಲಿಯ ವತಿಯಿಂದ ಶೈಕ್ಷಣಿಕ ನಿಧಿ ಹಸ್ತಾಂತರ ಹಾಗೂ ಮೂರು ಮಂದಿ ತೀರಾ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಫಲಾನುಭವಿಗಳಿಗೆ ಚಿಕಿತ್ಸಾ ವೆಚ್ಚವನ್ನು ಈ‌ವೇಳೆ ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಹಾಜಿ ಅಬ್ದುಲ್ ಲೆತೀಫ್ ಸಾಹೇಬ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಟ್ಲ ಒಕ್ಕೆತ್ತೂರು ಮಸ್ಜಿದ್ ಧರ್ಮಗುರು ರಫೀಕ್ ಅಹ್ಸನಿ, ಮಲ್‌ಜ‌ಅ ಪ್ರಾರ್ಥನಾ ಸಮ್ಮೇಳನ ಸ್ವಾಗತ ಸಮಿತಿ ಚೇರ್ಮೆನ್ ಹಾಜಿ ಹಸೈನಾರ್ ಶಾಫಿ ಗುರುವಾಯನಕೆರೆ, ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಶ್ರಫ್ ಚಿಲಿಂಬಿ ಇವರು ಶುಭ ಕೋರಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ಕೋಶಾಧಿಕಾರಿ ಎಂ.ಹೆಚ್. ಅಬೂಬಕ್ಕರ್, ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಅಧ್ಯಕ್ಷ ಎಂ‌.ಹೆಚ್. ಹಸನಬ್ಬ, ಹಿರಿಯರಾದ ಪುತ್ತಾಕ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಿಸಿದ ಸಮಾಜ ಸೇವಕ‌ ಅಬ್ಬೋನು ಮದ್ದಡ್ಕ ಅವರ ಕಾರ್ಯವನ್ನು ಅತಿಥಿಗಳು ಅಭಿನಂದಿಸಿದರು. ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ ವಂದಿಸಿದರು.

You may also like

News

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ಚೇತನ್ ಆರ್. IPS

ಪಶ್ಚಿಮ ವಲಯದ ಪೊಲೀಸ್ ಉಪ ಮಹಾನಿರೀಕ್ಷಕರಾಗಿ (DIGP) ಹಿರಿಯ IPS ಅಧಿಕಾರಿ ಚೇತನ್ ಆರ್. ಅವರು ಆಗಸ್ಟ್ 31ರಂದು ಸೋಮವಾರ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಬೆಳಗಿನ ಜಾವ
News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ

You cannot copy content of this page