July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕರೆಂಟ್ ಕಳ್ಳರಿಗೆ ಭಾರಿ ದಂಡ! ಬರೋಬ್ಬರಿ 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಿಧಿಸಿದ ಅಧಿಕಾರಿಗಳು

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ

ಕರೆಂಟ್ ಕಳ್ಳರಿಗೆ ಅಧಿಕಾರಿಗಳು ಸರಿಯಾಗಿಯೇ ಬಿಸಿ ಮುಟ್ಟಿಸಿದ್ದು, ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದವರ ವಿರುದ್ಧ ಸೆಸ್ಕ್ ಜಾಗೃತ ದಳದ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂದಿದ್ದಾರೆ. ಸೆಸ್ಕ್ ನಿಂದ 6 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ.

ಸೆಸ್ಕ್ ವಿಭಾಗದ ವ್ಯಾಪ್ತಿಗೆ ಒಳಪಡುವ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಐದು ಜಿಲ್ಲೆಗಳಲ್ಲಿ ಅಕ್ರಮವಾಗಿ ವಿದ್ಯುತ್ ಕಳ್ಳತನ, ವಿದ್ಯುತ್ ದುರುಪಯೋಗ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಗೃಹ, ವಾಣಿಜ್ಯ ವಿದ್ಯುತ್ ಸಂಪರ್ಕ ಪಡೆದವರ ಪೈಕಿ 1,312 ವಿದ್ಯುತ್ ಕಳ್ಳತನ ಪ್ರಕರಣಗಳು ಸಾಬೀತಾಗಿವೆ. ಈ ಪ್ರಕರಣಗಳಿಂದ ಒಟ್ಟು 6 ಕೋಟಿ ರೂಪಾಯಿಗಿಂತ ಹೆಚ್ಚು ದಂಡ ವಸೂಲಿ ಮಾಡಲಾಗುತ್ತಿದೆ.

ವಿದ್ಯುತ್ ಕಳ್ಳತನ ಮಾಡುವುದು ವಿದ್ಯುಚ್ಛಕ್ತಿ ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಸ್ವರೂಪದ ಶಿಕ್ಷಾರ್ಹ ಅಪರಾಧವಾಗಿದೆ. ಹೀಗಾಗಿಯೇ ಸೆಸ್ಕ್ ಅಧಿಕಾರಿಗಳು ಕಟ್ಟನಿಟ್ಟಿನ ಕಾರ್ಯಾಚರಣೆ ನಡೆಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page