July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ಬಿದ್ದು ಹಣ ಸ್ವೀಕರಿಸಿದ 6 ಮಂದಿ ಪೊಲೀಸರ ವರ್ಗಾವಣೆ

ಸಮವಸ್ತ್ರದಲ್ಲೇ ಪೊಲೀಸರು ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಸಮವಸ್ತ್ರದಲ್ಲಿ ಪೊಲೀಸರು ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಟೀಕೆ ವ್ಯಕ್ತವಾಗಿತ್ತು. ಇದೀಗ ಅವರ ಮೇಲೆ ಪೊಲೀಸ್ ಇಲಾಖೆ ಕ್ರಮಕ್ಕೆ ಮುಂದಾಗಿದ್ದು ಆರು ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ಆರು ಪೊಲೀಸರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ತಿಳಿಸಿದ್ದಾರೆ.

ಬಾದಾಮಿಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಎಎಸ್​​ಐ ಡಿಜೆ ಶಿವಪುರ, ಎಎಸ್​​ಐ ಜಿಬಿ ದಳವಾಯಿ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ವರ್ಗಾವಣೆಗೊಂಡ ಪೊಲೀಸರಾಗಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page