September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿ.ಎ. ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ

“ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು. ಪ್ರತಿಯೋರ್ವ ಗ್ರಾಹಕನು ತನ್ನ ಹಕ್ಕು ಮತ್ತು ಭಾದ್ಯತೆಗಳನ್ನು ತಿಳಿದು ನಡೆಯಬೇಕೆಂದು” ಮುಖ್ಯ ಅತಿಥಿಯಾಗಿ ಆಗಮಿಸಿದ ಅಡ್ವಕೇಟ್ ಕೆ. ಪೃಥ್ವಿರಾಜ್ ರೈ, ಮಾಜಿ ಅಧ್ಯಕ್ಷರು, ವಕೀಲರ ಸಂಘ ಮಂಗಳೂರು ಮಾತನಾಡಿ ಹೇಳಿದರು.

ಪಿ.ಎ. ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಒಡಂಬಡಿಕೆಯ ಅನ್ವಯ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಇಂದು ಮಾರ್ಚ್ 15ರಂದು ಶನಿವಾರ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆಯು ನಡೆಯಿತು. ಕಾರ್ಯಕ್ರಮದ ಪೀಠಿಕೆಯ ಕುರಿತು ಡಾ. ಅಬೂಬಕ್ಕರ್ ಸಿದ್ಧಿಕ್, ಒಡಂಬಡಿಕೆಯ ಸಂಚಾಲಕರು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿವರಿಸಿಕೊಟ್ಟರು. ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಜ್ ಜೆ. ಹಾಸಿಂ ಅಧ್ಯಕ್ಷೀಯ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಯವಂತ ನಾಯಕ್ ಪ್ರಾಧ್ಯಾಪಕರು ಅರ್ಥಶಾಸ್ತ್ರ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಶರಫುದ್ದೀನ್ ಪಿ.ಕೆ., ಎ.ಜಿ.ಎಮ್. ಕ್ಯಾಂಪಸ್ ಪಿ.ಎ.ಇ.ಟಿ., ಪಿ.ಎ. ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಶೈಕ್ಷಣಿಕ ವ್ಯವಹಾರಗಳ ಮುಖ್ಯಸ್ಥ ಡಾ. ಸಯ್ಯದ್ ಅಮೀನ್ ಅಹ್ಮದ್, ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಜಿ. ಹರಿಕೃಷ್ಣನ್, ಐ.ಕ್ಯೂ.ಎ.ಸಿ. ಸಂಯೋಜಕಿ ವಾಣಿಶ್ರೀ ವೈ. ವೇದಿಕೆಯಲ್ಲಿ ಆಸೀನರಾಗಿದ್ದರು.

ವಿದ್ಯಾರ್ಥಿಗಳಾದ ಹಿಬಾ ಮರ್ಯಂ ಕಾರ್ಯಕ್ರಮ ನಿರೂಪಿಸಿ, ಫರ್ಹಾನ್ ಸ್ವಾಗತಿಸಿ, ತಶ್ಮೀಯಾ ವಂದಿಸಿದರು. ಇರ್ಫಾದ್ ಪ್ರಾರ್ಥನೆ ನೆರವೇರಿಸಿದರು.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page