September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ

ದಕ್ಷಿಣ ಕನ್ನಡ ಜಿಲ್ಲೆ, ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ ಆದಿವಾಸಿಗಳು ನೆಲೆಸಿರುವ ಅರಣ್ಯ ಪ್ರದೇಶದ ವಸತಿ ಪ್ರದೇಶಗಳಿಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಮಾರ್ಗ ಅಳವಡಿಕೆಗೆ ಅರಣ್ಯ ಭೂಮಿ ಪರಿವರ್ತನೆಗಾಗಿ ಪರಿವೇಶ್ ಪೋರ್ಟಲ್ ನಲ್ಲಿ ಅರ್ಜಿ ಹಾಕಿಸಿ, ಅನುಮತಿ ಪಡೆಯಲು ಕ್ರಮ ವಹಿಸಿದ್ದರು. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದರು.

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page