September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲಿನಲ್ಲಿ  ಅಂತರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಸ್ಪರ್ಧೆ

ಎಪ್ರಿಲ್ 25 ರಿಂದ 27ರ ತನಕ ನಡೆಯಲಿರುವ ಸ್ಪರ್ಧೆಯಲ್ಲಿ  ಅಂತರಾಷ್ಟ್ರೀಯ ಮಟ್ಟದ ತಂಡಗಳು ಭಾಗಿ

ಬಾಲವಿಕಾಸ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾ ನಗರ, ಪೆರಾಜೆ, ಮಾಣಿಯಲ್ಲಿ 2025 ಎಪ್ರಿಲ್ 25ರಿಂದ 27ರ ತನಕ ಅಂತರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ಅನ್ನು ಇಂಡಿಯನ್ ಡಾಡ್ಜ್ ಬಾಲ್ ಫೆಡರೇಷನ್ (ರಿ.) ಕರ್ನಾಟಕ ರಾಜ್ಯ ಡಾಡ್ಜ್ ಬಾಲ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ ಜಿಲ್ಲಾ ಡಾಡ್ಜ್ ಬಾಲ್ ಅಸೋಸಿಯೇಷನ್ ಹಾಗೂ ಬಾಲವಿಕಾಸ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮಾಣಿ ಇದರ ಸಹಯೋಗದೊಂದಿಗೆ ನಡೆಯಲಿದೆ.

ಮಾರ್ಚ್ 20ರಂದು ಗುರುವಾರ ಇದರ ಬಗ್ಗೆ ಸಮಾಲೋಚನ ಸಭೆ ನಡೆಯಿತು. ಇದರಲ್ಲಿ ಊರ ಹಾಗೂ ಪರವೂರ ಗಣ್ಯ ವ್ಯಕ್ತಿಗಳು, ಬಾಲವಿಕಾಸ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಸಂಚಾಲಕ ಪ್ರಹ್ಲಾದ ಶೆಟ್ಟಿ ಜಡ್ತಿಲ, ಕರ್ನಾಟಕ ರಾಜ್ಯ ಡಾಡ್ಜ್ ಬಾಲ್ ಅಸೋಸಿಯೇಷನ್ ಇದರ ಕಾರ್ಯದರ್ಶಿ ಸಚಿನ್ ಉಪ್ಪಿನಂಗಡಿ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಕುಶಲ ಪೆರಾಜೆ, ಇಬ್ರಾಹಿಂ ಕೆ. ಮಾಣಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಡಿಯನ್ ಡಾಡ್ಜ್ ಬಾಲ್ ಫೆಡರೇಷನ್ ಇದರ ರೆಫ್ರಿ ಬೋರ್ಡ್ ಅಧ್ಯಕ್ಷ ವಿಜೇತ್ ಕುಮಾರ್ ಉಪ್ಪಿನಂಗಡಿ ಇವರು ಕಾರ್ಯಕ್ರಮ ನಿರೂಪಿಸಿ ಅತ್ಯುತ್ತಮವಾಗಿ ಈ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆ ಹೇಗೆ ನಡೆಸಬಹುದು ಎಂಬ ವಿಚಾರ ಸವಿವರವಾಗಿ ತಿಳಿಸಿದರು. ಈ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟದ 22ಕ್ಕೂ ಹೆಚ್ಚು ರಾಜ್ಯ ಮಟ್ಟದ 20 ಹಾಗೂ ಅಂತಾರಾಷ್ಟ್ರೀಯ ಮಟ್ಟದ 3ತಂಡಗಳು ಭಾಗವಹಿಸಲಿವೆ ಎಂದು ಹೇಳಿದರು. ಅಂತೆಯೇ ಕಾರ್ಯಕ್ರಮದ ಯಶಸ್ಸಿಗೆ ಬೇರೆ ಬೇರೆ ಕಮಿಟಿಗಳನ್ನು ಮಾಡಲಾಯಿತು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page