September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲೋಕಾಯುಕ್ತ ಬಲೆಗೆ ಬಿದ್ದ ಮಾಹಿತಿ ಆಯೋಗದ ಆಯುಕ್ತ

ರಾಜ್ಯ ಮಾಹಿತಿ ಆಯೋಗ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಘಟನೆ ನಡೆದಿದೆ.

ಬ್ಲ್ಯಾಕ್ ಲಿಸ್ಟ್ ನಲ್ಲಿರುವ RTI ಕಾರ್ಯಕರ್ತನ ಹೆಸರು ತೆಗೆಯಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುವಾಗ ಮಾರ್ಚ್ 27ರಂದು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. RTI ಕಾರ್ಯಕರ್ತ ಸಾಯಿಬಣ್ಣ ಅವರ ಹೆಸರನ್ನು ಕಪ್ಪು ಪಟ್ಟಿಯಿಂದ ತೆಗೆಯಲು ಡಾಕಪ್ಪರವರು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ರೂಪಾಯಿ ಒಂದು ಲಕ್ಷ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡ ಬಳಿಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೇಳಾಳ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

 

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page