May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ದರೋಡೆ ಯತ್ನ – ಇಬ್ಬರ ಬಂಧನ ಓರ್ವ ಪರಾರಿ

ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಮುತ್ತೂಟ್ ಫೈನಾನ್ಸ್ ಕಚೇರಿ ದರೋಡೆಗೆ ಯತ್ನಿಸಿದ ಘಟನೆ ಮಾರ್ಚ್ 29ರಂದು ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಖದೀಮರು ಬೀಗ ಒಡೆಯುತ್ತಿರುವಾಗಲೇ ಫೈನಾನ್ಸ್ ಮಳಿಗೆಯ ಸೈರನ್ ಮೊಳಗಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ.

ಶನಿವಾರ ತಡರಾತ್ರಿ ಸುಮಾರು 1.30 ಗಂಟೆಗೆ ಘಟನೆ ನಡೆದಿದೆ. ದೇರಳಕಟ್ಟೆ ಜಂಕ್ಷನ್ ನಲ್ಲಿರುವ ಹೆಚ್.ಎಂ. ಟಿಂಬರ್ಸ್ ಸಂಸ್ಥೆಗೆ ಸೇರಿದ ವಾಣಿಜ್ಯ ಕಟ್ಟಡದ ಮೇಲಂತಸ್ತಿನಲ್ಲಿ ಕಾರ್ಯಾಚರಿಸುತ್ತಿರುವ ಮುತ್ತೂಟ್ ಫೈನಾನ್ಸ್ ಗೆ ಕೇರಳ ಮೂಲದ ಮೂವರು ಖದೀಮರು ಕನ್ನ ಹಾಕಿದ್ದಾರೆ. ಇನ್ನೇನು ಖದೀಮರು ಕಳ್ಳತನ ನಡೆಸಲು ಮಳಿಗೆಯ ಬೀಗ ಒಡೆಯುತ್ತಿರುವಾಗಲೇ ಸೈರನ್ ಮೊಳಗಿದ್ದು ಮುತ್ತೂಟ್ ಫೈನಾನ್ಸ್ ನ ಕಂಟ್ರೋಲ್ ರೂಂಗೆ ಮಾಹಿತಿ ರವಾನೆಯಾಗಿದೆ. ಫೈನಾನ್ಸ್ ಸಂಸ್ಥೆಯ ಮೇಲಾಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸೈರನ್ ಮೊಳಗುತ್ತಿದ್ದಾಗಲೇ ಫೈನಾನ್ಸ್‌ ಸುತ್ತ ಮುತ್ತಲೂ ಸ್ಥಳೀಯರು ಜಮಾಯಿಸಿದ್ದು, ಇಬ್ಬರು ಆರೋಪಿಗಳಾದ ಕೇರಳದ ಕಾಂಞಂಗಾಡ್ ಮೂಲದ ಮುರಳಿ ಮತ್ತು ಕಾಸರಗೋಡು ನಿವಾಸಿ ಹರ್ಷದ್ ಎಂಬವರು ಕಟ್ಟಡದಲ್ಲಿ ಲಾಕ್ ಆಗಿದ್ದು, ಸ್ಥಳಕ್ಕೆ ಧಾವಿಸಿದ ಕೊಣಾಜೆ ಪೊಲೀಸರು ಇಬ್ಬರು ಆರೋಪಿಗಳು ಮತ್ತು ಕೃತ್ಯ ಎಸಗಲು ತಂದಿದ್ದ ಡ್ರಿಲ್ ಮೆಷಿನ್ ಅನ್ನು ವಶಕ್ಕೆ ಪಡೆದಿದ್ದಾರೆ.

ಮತ್ತೋರ್ವ ಆರೋಪಿ ಕಾಸರಗೋಡು ಮೂಲದ ಅಬ್ದುಲ್ ಲತೀಫ್ ಪರಾರಿಯಾಗಿದ್ದಾನೆ. ಮುರಳಿ ಮತ್ತು ಅಬ್ದುಲ್ ಲತೀಫ್ ಎಂಬ ಆರೋಪಿಗಳು ಕೇರಳದಲ್ಲಿ ಈ ಹಿಂದೆ ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು ಎನ್ನುವ ಮಾಹಿತಿಯಿದೆ. ಕಳೆದ ಜನವರಿ ತಿಂಗಳಲ್ಲಿ ಕೆ.ಸಿ. ರೋಡಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಶಾಖೆಯಲ್ಲಿ ನಡೆದಿದ್ದ ದರೋಡೆಯು ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದೀಗ ದೇರಳಕಟ್ಟೆಯ ಮುತ್ತೂಟ್ ಫೈನಾನ್ಸ್ ನಲ್ಲಿ ಉತ್ಕೃಷ್ಟ ಮಟ್ಟದ ರಕ್ಷಣಾ ಸಲಕರಣೆ ಅಳವಡಿಸಿದ ಪರಿಣಾಮ ಸಂಭವನೀಯ ದರೋಡೆ ಪ್ರಕರಣ ವಿಫಲವಾಗಿದೆ. ಘಟನಾ ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್, ಕೊಣಾಜೆ ಇನ್ಸ್ ಪೆಕ್ಟ‌ರ್ ರಾಜೇಂದ್ರ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page