July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಕ್ಷೇಪಣೆ ಸಲ್ಲಿಕೆಗೆ ಲಂಚ ಸ್ವೀಕಾರ – ಸಹಾಯಕ ಸರ್ಕಾರಿ ಅಭಿಯೋಜಕನ ಬಂಧನ

ಮರಳು ಸಾಗಣೆಯ ವಾಹನದ ಬಿಡುಗಡೆಗೆ ಸಂಬಂಧ ಪಟ್ಟಂತೆ ನ್ಯಾಯಾಲಯಕ್ಕೆ ಅರ್ಜಿದಾರರು ಸಲ್ಲಿಸಿದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಲಂಚ ಪಡೆದುಕೊಂಡ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ನಾಯಕ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಲಂಚ ಪಡೆದ ಆರೋಪಿ ವಕೀಲರಾದ ಗಣಪತಿ ನಾಯ್ಕ ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದರು. ದೂರುದಾರ ವ್ಯಕ್ತಿಯು ತಮ್ಮ ಪರಿಚಯದ ವ್ಯಕ್ತಿಯೊಬ್ಬರ ವಾಹನದಲ್ಲಿ ಮುಲ್ಕಿಯಿಂದ ಉಡುಪಿಗೆ ಮರಳು ಸಾಗಿಸುತ್ತಿದ್ದರು. ಉಡುಪಿ ನಗರ ಪೊಲೀಸರು ಅಕ್ರಮವಾಗಿ ಮರಳು ಸಾಗಿಸುತ್ತಿರುವ ಆರೋಪದಲ್ಲಿ ನಿಟ್ಟೂರು ಬಳಿ ಆ ವಾಹನವನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿದ್ದರು.

ನ್ಯಾಯಾಲಯದಿಂದ ಈ ವಾಹನವನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಮುಂದಿನ ಕ್ರಮಗಳಿಗಾಗಿ ಅಧಿಕಾರ ಪತ್ರ ಹೊಂದಿದ್ದ ದೂರುದಾರರು ಪ್ರಧಾನ ಸಿವಿಲ್ ನ್ಯಾಯಾಲಯ ಜೆಎಂಎಫ್‌ ಸಿ ನ್ಯಾಯಾಲಯದ ಮೊರೆ ಹೋಗಿದ್ದರು. ವಾಹನ ಬಿಡುಗಡೆ ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸರ್ಕಾರದ ಪರವಾಗಿ ಆಕ್ಷೇಪಣೆ ಸಲ್ಲಿಸಲು ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ನಾಯಕ 2 ಸಾವಿರ ರೂಪಾಯಿ ನೀಡಲು ಬೇಡಿಕೆ ಇಟ್ಟಿದ್ದರು. ವಕೀಲರ ಈ ಬೇಡಿಕೆಯಿಂದ ಬೇಸತ್ತ ಅರ್ಜಿದಾರರು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ನಾಯಕ ಅವರು ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದರು. ನ್ಯಾಯಾಲಯ ಸಂಕೀರ್ಣದಲ್ಲಿರುವ ಎಪಿಪಿ ಅವರ ಕೊಠಡಿಯಲ್ಲಿ ಲೋಕಾಯುಕ್ತ ಪೊಲೀಸರು ಆರೋಪಿ ವಕೀಲರನ್ನು ಬಂಧಿಸಿದ್ದಾರೆ. ಈ ಕಾರ್ಯಚರಣೆಯಲ್ಲಿ ಮಂಗಳೂರಿನ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ಪ್ರಭಾರ ಡಿವೈಎಸ್ಪಿ ಮಂಜುನಾಥ ರಾಜೇಂದ್ರ ನಾಯಕ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page