August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸರ್ಕಾರಿ ನೌಕರ 48 ಗಂಟೆಗೂ ಹೆಚ್ಚು ಕಾಲ ಬಂಧನದಲ್ಲಿದ್ದರೆ ಸೇವೆಯಿಂದ ತಂತಾನೇ ಅಮಾನತು- ಹೈಕೋರ್ಟ್

ರಾಜ್ಯ ಸರ್ಕಾರಿ ನೌಕರನೊಬ್ಬ 48 ಗಂಟೆಗಳಿಗೂ ಹೆಚ್ಚು ಕಾಲ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯಿದೆಯ ಅಡಿಯಲ್ಲಿ ಬಂಧನದಲ್ಲಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆಯಾದರೆ ಆತನನ್ನು ಸೇವೆಯಿಂದ ತಂತಾನೇ ಅಮಾನತುಗೊಂಡಿರುತ್ತಾನೆ. ಈ ಹಿನ್ನಲೆಯಲ್ಲಿ ಸಕ್ಷಮ ಪ್ರಾಧಿಕಾರ ಅಮಾನತು ರದ್ದುಗೊಳಿಸಿ ಮುಂದಿನ ಔಪಚಾರಿಕ ಆದೇಶ ಹೊರಡಿಸುವ ತನಕ ಆತನ ಅಮಾನತು ಮುಂದುವರೆಯುತ್ತದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕರ್ನಾಟಕ ಆಡಳಿತ ನ್ಯಾಯಾಧಿಕರಣ (ಕಎಟಿ) ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮ ಪಂಚಾಯ್ತಿ ಪಿಡಿಓ ಡಿ.ಎಂ. ಪದ್ಮನಾಭ ಎಂಬುವರು ಹೈಕೋರ್ಟ್ ಗೆ ಅರ್ಜಿಯಲ್ಲಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ಸಿ.ಎಂ. ಜೋಶಿ ಅವರ ವಿಭಾಗೀಯ ಪೀಠವು ಇಂತಹ ಅರ್ಜಿಯನ್ನು ವಜಾಗೊಳಿಸಿದೆ.

ಸರ್ಕಾರಿ ನೌಕರ ಬಂಧನಕ್ಕೆ ಒಳಗಾಗಿದ್ದ ನಂತರ, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದ ಮೇಲೆ ನೇರ ಕಚೇರಿಗೆ ಹೋಗಬಹುದೇ ಇಲ್ಲವೇ ಎಂಬುದನ್ನು 2015ರ ಸರ್ಕಾರಿ ಸುತ್ತೋಲೆಯ ಪ್ರಕಾರ ಸಕ್ಷಮ ಪ್ರಾಧಿಕಾರ ನಿರ್ಧರಿಸಬೇಕು. ಅಂತಹ ಸರ್ಕಾರಿ ಅಧಿಕಾರಿಯ ಅಮಾನತು ಆದೇಶವನ್ನು ರದ್ದುಪಡಿಸಬೇಕೋ, ಬೇಡವೋ ಎಂಬ ಬಗ್ಗೆಯೂ ಪ್ರಾಧಿಕಾರವೇ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ಹೇಳಿತು.

ಇನ್ನು ಕರ್ನಾಟಕ ನಾಗರೀಕ ನಿಯಮಗಳು 1957ರ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮ 10 (2) (ಎ) ನಿಯಮಗಳ ಪ್ರಕಾರ ಸರ್ಕಾರಿ ನೌಕರ 48 ಗಂಟೆಗಳಿಗೂ ಹೆಚ್ಚುಕಾಲ ಬಂಧನದಲ್ಲಿದ್ದರೆ ಸೇವೆಯಿಂದ ತಂತಾನೆ ಅಮಾನತುಗೊಳ್ಳುತ್ತಾನೆ ಎಂಬುದಾಗಿ ತಿಳಿಸಿದೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page