July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನ್ಯಾಯಾಲಯದಲ್ಲಿ ಅನುಚಿತ ವರ್ತನೆ ಮಾಡಿದ ವಕೀಲನಿಗೆ ಆರು ತಿಂಗಳು ಜೈಲು

ವಕೀಲರ ನಿಲುವಂಗಿ ಧರಿಸದೆ ಮತ್ತು ಶರ್ಟ್ ಬಟನ್ ಬಿಚ್ಚಿ ನ್ಯಾಯಾಲಯಕ್ಕೆ ಹಾಜರಾದ 2021ರ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್ ಸ್ಥಳೀಯ ವಕೀಲ ಅಶೋಕ್ ಪಾಂಡೆಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ವಕೀಲ ಸರಿಯಾದ ಸಮವಸ್ತ್ರ ಧರಿಸಿದೆ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ರೀತಿ ನ್ಯಾಯಾಲಯಕ್ಕೆ ಬರುವಂತಿಲ್ಲ ಎಂದಿದ್ದಕ್ಕೆ ನ್ಯಾಯಾಧೀಶರನ್ನು ಗೂಂಡಾಗಳು ಎಂದು ಕರೆದಿದ್ದರು. ಬಳಿಕ ನ್ಯಾಯಾಧೀಶರು ಅವರನ್ನು ಹೊರಗೆ ಕಳಿಸಿದ್ದರು. ಈ ಸಂಬಂಧ ನ್ಯಾಯಾಲಯ ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿತ್ತು ಎಂದು ವರದಿಗಳು ಹೇಳಿವೆ.

ಪ್ರಕರಣ ಸಂಬಂಧ ಎಪ್ರಿಲ್ 10ರಂದು ಗುರುವಾರ ಆದೇಶ ಹೊರಡಿಸಿದ ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಬಿ.ಆರ್. ಸಿಂಗ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಶಿಕ್ಷೆ ಅನುಭವಿಸುವ ಸಲುವಾಗಿ ಲಕ್ನೋ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಶರಣಾಗಲು ವಕೀಲನಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ. ಅಲ್ಲದೆ 2,000 ರೂಪಾಯಿ ದಂಡ ಪಾವತಿಸಲು ಸೂಚಿಸಿದೆ. ವಿಫಲವಾದರೆ ಹೆಚ್ಚುವರಿಯಾಗಿ ಒಂದು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದೆ. ತಪ್ಪಿತಸ್ಥ ವಕೀಲನನ್ನು ಅಲಹಾಬಾದ್ ಹೈಕೋರ್ಟ್ ಮತ್ತು ಅದರ ಲಕ್ನೋ ಪೀಠದ ವೃತ್ತಿಯಿಂದ ಏಕೆ ನಿರ್ಬಂಧಿಸಬಾರದು? ಎಂದು ಅವರ ಪರ ವಕೀಲರಿಗೆ ಶೋಕಾಸ್ ನೋಟಿಸ್ ನೀಡಿದೆ. ನೋಟಿಸ್‌ಗೆ ಪ್ರತಿಕ್ರಿಯೆ ಕೊಡಲು ವಕೀಲರಿಗೆ ಮೇ 1ರವರೆಗೆ ಸಮಯ ನೀಡಿದೆ.

ಆರೋಪದ ಗಂಭೀರತೆ, ಅಶೋಕ್ ಪಾಂಡೆಯ ಹಿಂದಿನ ನಡವಳಿಕೆ ಹಾಗೂ ವಿಚಾರಣೆಯಲ್ಲಿ ಪಾಲ್ಗೊಳ್ಳಲು ಅವರ ನಿರಾಕರಣೆಯ ಕಾರಣಕ್ಕೆ ಅನುಕರಣೀಯ ಶಿಕ್ಷೆ ವಿಧಿಸುವುದು ಅನಿವಾರ್ಯವಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ವಕೀಲ ಪಾಂಡೆ ಈ ಹಿಂದೆಯೂ ನ್ಯಾಯಾಂಗ ನಿಂದನೆ ಆರೋಪ ಎದುರಿಸಿದ್ದರು. 2017 ರಲ್ಲಿ, ಅವರು ಅಲಹಾಬಾದ್ ಹೈಕೋರ್ಟ್ ಮತ್ತು ಅದರ ಲಕ್ನೋ ಪೀಠದ ಆವರಣಕ್ಕೆ ಎರಡು ವರ್ಷಗಳ ಕಾಲ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿತ್ತು ಎಂಬುವುದನ್ನು ತೀರ್ಪು ಪ್ರಕಟಿಸುವ ವೇಳೆ ನ್ಯಾಯಪೀಠ ಗಮನಿಸಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page